RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅಧಿಕಾರ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ:ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅಧಿಕಾರ : ಶಾಸಕ ಬಾಲಚಂದ್ರ ಜಾರಕಿಹೊಳಿ 

ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅಧಿಕಾರ : ಶಾಸಕ ಬಾಲಚಂದ್ರ ಜಾರಕಿಹೊಳಿ

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜೂ 21 :

 
ಕೌಜಲಗಿ ಗ್ರಾಮದ ಅಭಿವೃದ್ಧಿಯಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲ ಸಮುದಾಯದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಗತಿ ಕಾರ್ಯಗಳನ್ನು ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಿವಿಮಾತು ಹೇಳಿದರು.
ಕೌಜಲಗಿ ಗ್ರಾಮ ಪಂಚಾಯತಿ ಸಮೀತಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡ ಜಕೀರ ಜಮಾದಾರ ಅವರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರ ಶಾಶ್ವತವಲ್ಲ. ಅಧಿಕಾರವಿದ್ದಾಗ ಎಲ್ಲರ ಪ್ರೀತಿ-ವಿಶ್ವಾಸ ಗಳಿಸಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವಂತೆ ಅವರು ಹೇಳಿದರು.
ಅಲ್ಪಸಂಖ್ಯಾತರಿಗೆ ಅಧಿಕಾರ : ಅಲ್ಪಸಂಖ್ಯಾತರ ರಕ್ಷಣೆಗೆ ಬಿಜೆಪಿ ಬದ್ಧವಾಗಿದೆ. ಕೇವಲ ವೋಟ್ ಬ್ಯಾಂಕ್‍ಗಾಗಿ ಬಿಜೆಪಿ ಹೊರತುಪಡಿಸಿ ಎಲ್ಲ ಪಕ್ಷಗಳು ಅಲ್ಪಸಂಖ್ಯಾತರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಅಧಿಕಾರ ನೀಡಲಾಗುತ್ತಿದೆ. ಕೌಜಲಗಿ ಹಾಗೂ ತಳಕಟ್ನಾಳ ಗ್ರಾಮ ಪಂಚಾಯತಿಗಳಿಗೆ ಈ ಸಮುದಾಯದವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದನ್ನು ಬಾಂಧವರು ಅರಿಯಬೇಕು. ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಈ ಸಮುದಾಯದವರು ಪ್ರಚಾರ ಮಾಡಬೇಕು. ಅಂದಾಗ ಮಾತ್ರ ನಾವು ಅಧಿಕಾರ ಕೊಟ್ಟಿರುವುದಕ್ಕೆ ಸಾರ್ಥಕವಾಗುತ್ತದೆ ಎಂದು ಅವರು ಹೇಳಿದರು.
ಕೌಜಲಗಿ ಗ್ರಾಮ ಪಂಚಾಯತಿ ನೇತೃತ್ವ ವಹಿಸಿಕೊಂಡಿರುವ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಮುಂದುವರೆದ ಜಾತಿಯವರು ಜಾತಿ ರಾಜಕಾರಣ ಮಾಡಬಹುದು. ಆದರೆ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ಮತಕ್ಷೇತ್ರದ ಎಲ್ಲ ಸಮಾಜದ ಪ್ರೀತಿ-ವಿಶ್ವಾಸ ಗಳಿಸಿ ಅಜಾತ ಶತ್ರುವಾಗಿದ್ದಾರೆ. ಇವರೆಂದೂ ಜಾತಿ ರಾಜಕೀಯ ಮಾಡುವುದಿಲ್ಲ. ಅಭಿವೃದ್ಧಿ ಕೆಲಸಗಳಲ್ಲಿ ಎಂದಿಗೂ ಪಕ್ಷಬೇಧ ಮಾಡುವುದಿಲ್ಲವೆಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ನೀಲಪ್ಪ ಕೇವಟಿ, ರಾಯಪ್ಪ ಬಳೋಲದಾರ, ಸಿದ್ದಪ್ಪ ಹಳ್ಳೂರ, ಮಕ್ತುಮಸಾಬ ಖಾಜಿ, ಮಾಜಿ ತಾಪಂ ಉಪಾಧ್ಯಕ್ಷ ಸುಭಾಸ ಕೌಜಲಗಿ, ಹಾಸೀಮಸಾಬ ನಗಾರ್ಚಿ, ಯಲ್ಲಪ್ಪ ದಾನನ್ನವರ, ಬಸಪ್ಪ ಜೋಗಿ, ಚಂದ್ರಶೇಖರ ಧೂಳಪ್ಪನವರ, ಶಬ್ಬೀರ ಸುಬೇದಾರ, ಮುಂತಾದವರು ಉಪಸ್ಥಿತರಿದ್ದರು.

Related posts: