RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ:ಜಿ.ಬಿ.ಬಡಕುಂದ್ರಿ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗೋಕಾಕ:ಜಿ.ಬಿ.ಬಡಕುಂದ್ರಿ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಜಿ.ಬಿ.ಬಡಕುಂದ್ರಿ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

 

 
ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಅ 30 :

 

 

 

ಸ್ಥಳೀಯ ಮಲ್ಲಾಪೂರ ಪಿ.ಜಿ ಪಟ್ಟಣದ ಜಿ.ಬಿ.ಬಡಕುಂದ್ರಿ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಯಾದಯಾಡದಲ್ಲಿ ನಡೆದ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಮೂಡಲಗಿ ತಾಲೂಕದ ಪದವಿ ಪೂರ್ವ ಕಾಲೇಜಿಗಳ ದಿ.27 ಮತ್ತು 28ರಂದು ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ಜಿ.ಬಿ.ಬಡಕುಂದ್ರಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗುಂಪು ಆಟಗಳಲ್ಲಿ ಟೆನಿಕ್ವಾಯಿಟ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಥ್ರೋ ಬಾಲ್‍ದಲ್ಲಿ ದ್ವಿತೀಯ ಸ್ಥಾನ, ವೈಯಕ್ತಿಕ ಆಟಗಳ ವಿಭಾಗದಲ್ಲಿ ಸಂತೋಷ ಗಾಡಿವಡ್ಡರ ಹ್ಯಾಮರ ತ್ರೋ ಪ್ರಥಮ ಸ್ಥಾನ, ಕುಸ್ತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕಯಾಗಿದ್ದಾರೆ, ಬಾಗ್ಯಶ್ರೀ ನಾಯಿಕ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಪ್ರೀತಿ ಕೌಜಲಗಿ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ, 400 ಮೀಟರ ಓಟದಲ್ಲಿ ತೃತೀಯ ಸ್ಥಾನ, ಬಾಲಕಿಯರ 4×100 ರೀಲೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಎಲ್ಲ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ.
ಜಿಲ್ಲಾಮಟ್ಟಕ್ಕೆ ಅಯ್ಕೆಯಾದ ಎಲ್ಲ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಅರವಿಂದ ಬಡಕುಂದ್ರಿ, ಪ್ರಾಚಾರ್ಯ ಅಮೀರ ಮುಲ್ತಾನಿ, ಹಾಗೂ ನೀಡ್ಸ್ ಶೀಕ್ಷಣ ಸಂಸ್ಥೆಯ ಕಾಲೇಜಿನ ಎಲ್ಲ ಉಪನ್ಯಾಸಕರು, ಹಾಗೂ ಸಿಬ್ಬಂದಿಯವರು ವಿಧ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts: