RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಸಂತ್ರಸ್ತರ ನೆರವಿಗೆ ಹೆಚ್ಚಿನ ಅನುದಾನಕ್ಕಾಗಿ ಕೇಂದ್ರಕ್ಕೆ ಮೊರೆ ಹೋದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ:ಸಂತ್ರಸ್ತರ ನೆರವಿಗೆ ಹೆಚ್ಚಿನ ಅನುದಾನಕ್ಕಾಗಿ ಕೇಂದ್ರಕ್ಕೆ ಮೊರೆ ಹೋದ ಶಾಸಕ ಬಾಲಚಂದ್ರ ಜಾರಕಿಹೊಳಿ 

ಸಂತ್ರಸ್ತರ ನೆರವಿಗೆ ಹೆಚ್ಚಿನ ಅನುದಾನಕ್ಕಾಗಿ ಕೇಂದ್ರಕ್ಕೆ ಮೊರೆ ಹೋದ ಶಾಸಕ ಬಾಲಚಂದ್ರ ಜಾರಕಿಹೊಳಿ

 

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಸೆ 10 :

 

 

 

ಅಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಅಂದಾಜು 7ಸಾವಿರ ಕೋಟಿ ರೂಗಳಷ್ಟು ಹಾನಿಯಾಗಿದೆ. ಸಂತ್ರಸ್ತರ ನೆರವಿಗಾಗಿ ಅನುದಾನÀವನ್ನು ಬಿಡುಗಡೆ ಮಾಡಿಸುವಂತೆ ಅರಭಾಂವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಮಂಗಳವಾರದಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಸುರೇಶ ಅಂಗಡಿಯವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡ ಅವರು, ಪ್ರವಾಹದಿಂದಾಗಿ ಸಂತ್ರಸ್ತರ ಸ್ಥಿತಿ ಚಿಂತಾಜನಕವಾಗಿದ್ದು ಕೂಡಲೇ ಕೇಂದ್ರದಿಂದ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿಸುವಂತೆ ಸಚಿವರಲ್ಲಿ ಕೋರಿಕೊಂಡರು.
ಮಳೆ ಹಾಗೂ ಪ್ರವಾಹದಿಂದಾಗಿ ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಇಲ್ಲಿಯವರೆಗೆ ಅಂದಾಜು 7ಸಾವಿರ ಕೋಟಿಗಳಷ್ಟು ಆಸ್ತಿ-ಪಾಸ್ತಿ ಹಾನಿಯಾಗಿದೆ. ಬೆಳೆಗಳ ಹಾನಿ, ರಸ್ತೆಗಳು, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು, ದೇವಸ್ಥಾನಗಳು, ಸರ್ಕಾರಿ ಕಟ್ಟಡಗಳು ಸಹಿತ ಅಪಾರ ಪ್ರಮಾಣದಲ್ಲಿ ಪ್ರವಾಹಕ್ಕೆ ಸಿಕ್ಕು ಹಾನಿಯಾಗಿವೆ. ಅದರಲ್ಲೂ ನಮ್ಮ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಪ್ರವಾಹದಿಂದಾಗಿ ಸಾವಿರಾರು ಕೋಟಿ ರೂಗಳಷ್ಟು ಹಾನಿಯನ್ನು ಅಂದಾಜಿಸಲಾಗಿದೆ. ಮನೆಗಳು ಜಲಾವೃತಗೊಂಡು ಸಂಪೂರ್ಣವಾಗಿ ಕುಸಿದು ಬಿದ್ದಿವೆ. ದಿನನಿತ್ಯ ಉಪಯೋಗಿಸುವ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡು ಜನ ನಿರಾಶ್ರಿತರಾಗಿದ್ದಾರೆ. ಜೊತೆಗೆ ಜಾನವಾರುಗಳು ಸಹ ನೀರಿನಲ್ಲಿ ಕೊಚ್ಚಿ ಹೋಗಿವೆ. ಪ್ರಮುಖ ವಾಣಿಜ್ಯ ಬೆಳೆಗಳು ನೆಲ ಕಚ್ಚಿವೆ. ಕೂಡಲೇ ಕೇಂದ್ರ ಸರ್ಕಾರ ಸಂತ್ರಸ್ತರ ಪುನರ್ವಸತಿಗಾಗಿ ಹಾಗೂ ಅವರ ಹೊಸ ಬದುಕನ್ನು ಕಟ್ಟಿಕೊಳ್ಳಲು ಶೀಘ್ರವೇ ಅನುದಾನ ಬಿಡುಗಡೆ ಮಾಡಿ ಸಂತ್ರಸ್ತರÀ ನೆರವಿಗೆ ಧಾವಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿಕೊಂಡರು. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಖುದ್ದಾಗಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಅಭಯ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಸಹಕಾರ ಹಾಲು ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಕೇಂದ್ರ ರೈಲ್ವೆ ಸಹಾಯಕ ಸಚಿವ ಸುರೇಶ ಅಂಗಡಿ ಅವರು ನವದೆಹಲಿಯ ತಮ್ಮ ನಿವಾಸದಲ್ಲಿ ಸತ್ಕರಿಸಿದರು.
ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನೆಲಮಂಗಲ ಮಾಜಿ ಶಾಸಕ ಎಮ್.ವಿ.ನಾಗರಾಜ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts: