RNI NO. KARKAN/2006/27779|Thursday, November 7, 2024
You are here: Home » breaking news » ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ: ಸನತ

ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ: ಸನತ 

ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ: ಸನತ

 

ನಮ್ಮ ಬೆಳಗಾವಿ ಇ – ,ವಾರ್ತೆ , ಗೋಕಾಕ ಜ 2 :

 

ಪಠ್ಯದಷ್ಟೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು.
ಗುರುವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಸದೃಢರಾಗಿ ಸಾಧಕರಾಗಬಹುದು. ಸೋಲು-ಗೆಲುವಿಗೆ ಮಹತ್ವ ನೀಡದೇ ಇಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಕ್ರೀಡಾ ಮನೋಭಾವವನ್ನು ಮೆರೆದು ತಮ್ಮ ಸಾಮಥ್ರ್ಯದಿಂದ ಉತ್ತಮ ಕ್ರೀಡಾಪಟುಗಳಾಗಿರೆಂದು ಹಾರೈಸಿದರು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರುಗಳಾದ ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ್, ಪಿ.ವಿ.ಚಚಡಿ, ದೈಹಿಕ ಶಿಕ್ಷಕರುಗಳಾದ ಎಸ್.ಕೆ.ಹುಲ್ಯಾಳ, ಎಸ್.ಬಿ.ಪಡನಾಡಿ, ಎಸ್.ಎಸ್.ದೊಡಮನಿ ಹಾಗೂ ಶಿಕ್ಷಕರು ಸಿಬ್ಬಂದಿಯವರು ಇದ್ದರು.

Related posts: