RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಪಾಲಕರು ತಮ್ಮ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಬೇಕು : ಪ್ರೋ: ಚಂದ್ರಶೇಖರ

ಗೋಕಾಕ:ಪಾಲಕರು ತಮ್ಮ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಬೇಕು : ಪ್ರೋ: ಚಂದ್ರಶೇಖರ 

ಪಾಲಕರು ತಮ್ಮ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಬೇಕು : ಪ್ರೋ: ಚಂದ್ರಶೇಖರ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜ 29 :

 
ಪಾಲಕರು ತಮ್ಮ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅವರನ್ನು ಉತ್ತಮ ನಾಗರೀಕರನ್ನಾಗಿ ಮಾಡುವಂತೆ ಪ್ರೋ: ಚಂದ್ರಶೇಖರ ಅಕ್ಕಿ ಹೇಳಿದರು.
ಅವರು ಮಂಗಳವಾರದಂದು ನಗರದ ವಿದ್ಯಾನಿಕೇತನ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರೊಂದಿಗೆ ಅವರು ಯಶಸ್ವಿಯಾಗಲು ಸಿದ್ಧ ಗೊಳಿಸಬೇಕು. ಅವರಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ ಇತರ ಮಕ್ಕಳೊಂದಿಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಇರುವಂತಹ ಮನೋಭಾವ ಬೆಳೆಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡಿ ದೇಶಕ್ಕೆ ಕೊಡುಗೆಯಾಗಿ ನೀಡುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಎಲ್.ಟಿ.ತಪಸಿ ಮಾತನಾಡಿ ತಾಯಂದಿರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಭಾರತೀಯ ಪರಂಪರೆಯನ್ನು ಮುಂದುವರಿಸುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿದವು.
ವೇದಿಕೆ ಮೇಲೆ ಕ್ಷೇತ್ರಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಗಣ್ಯರಾದ ಸಿದ್ದಪ್ಪ ಶೀಗಿಹಳ್ಳಿ, ಸುಲೋಚನಾ ತಪಸಿ, ಸಂಸ್ಥೆಯ ಕಾರ್ಯದರ್ಶಿ ಐ.ಎಸ್.ಶೀಗಿಹಳ್ಳಿ, ಸಹಕಾರ್ಯದರ್ಶಿ ಎಸ್.ಡಿ.ಜಾಧವ, ಮುಖ್ಯೋಪಾಧ್ಯಾಯಿನಿ ಆರ್.ಆರ್.ಗಾಣಿಗೇರ ಇದ್ದರು. ಶಿಕ್ಷಕಿ ಮಂಜುಳಾ ಪಾಟೀಲ ಸ್ವಾಗತಿಸಿದರು. ಸಾವಿತ್ರಿ ಮಾನಗಾಂವಿ ಹಾಗೂ ಸೀಮಾ ಹಳಕಟ್ಟಿ ನಿರೂಪಿಸಿದರು. ಸುಧಾ ಅರಭಾವಿ ವಂದಿಸಿದರು.

Related posts: