RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಪ್ರತಿಯೊಬ್ಬ ಮ್ಕಕಳಲ್ಲಿಯ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಪಾಲಕರ ಮತ್ತು ಶಿಕ್ಷಕರ ಮೇಲಿದೆ :ಜಗದೀಶ ಗಂಗನ್ನವರ

ಗೋಕಾಕ:ಪ್ರತಿಯೊಬ್ಬ ಮ್ಕಕಳಲ್ಲಿಯ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಪಾಲಕರ ಮತ್ತು ಶಿಕ್ಷಕರ ಮೇಲಿದೆ :ಜಗದೀಶ ಗಂಗನ್ನವರ 

ಪ್ರತಿಯೊಬ್ಬ ಮ್ಕಕಳಲ್ಲಿಯ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಪಾಲಕರ ಮತ್ತು ಶಿಕ್ಷಕರ ಮೇಲಿದೆ :ಜಗದೀಶ ಗಂಗನ್ನವರ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 2 :

 
ಪ್ರತಿಯೊಬ್ಬ ಮ್ಕಕಳಲ್ಲಿಯೂ ಪ್ರತಿಭೆ ಇದ್ದು ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಪಾಲಕರ ಮತ್ತು ಶಿಕ್ಷಕರ ಮೇಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರ ಕಾರ್ಯಾಲಯದ ಉಪನಿರ್ದೇಶಕ ಜಗದೀಶ ಗಂಗನ್ನವರ ಹೇಳಿದರು.
ಶನಿವಾರದಂದು ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮಹತ್ತರ ವರ್ಷಗಳಾಗಿದ್ದು ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಪ್ರಯತ್ನಶೀಲರಾಗಬೇಕು. ಇದಕ್ಕೆ ಪೂರಕವಾಗಿ ಸಹಕಾರ ಹಾಗೂ ಮಾರ್ಗದರ್ಶನವನ್ನು ಪಾಲಕರು ಮತ್ತು ಶಿಕ್ಷಕರು ನೀಡಬೇಕು. ಎಲೆಕ್ಟ್ರಾನಿಕ್ ಮಾಧ್ಯಮಗಳು ಒಳ್ಳೇಯ ಉದ್ದೇಶಕ್ಕೆ ಉಪಯೋಗಿಸಿಪ್ರತಿಭಾನ್ವಿತರಾಗಿರೆಂದು ಶುಭ ಹಾರೈಸಿದರು.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಆಧುನಿಕ ತಾಂತ್ರಿಕತೆಯೊಂದಿಗೆ ಗುಣಮಟ್ಟದ ಶಿಕ್ಷಣ ದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಲಾಗುತ್ತದೆ ಎಂದರು.
ವೇದಿಕೆ ಮೇಲೆ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ,ಮುಖ್ಯೋಪಾಧ್ಯಾಯರಾದ ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ್, ಪಿ.ವಿ.ಚಚಡಿ ಇದ್ದರು.

Related posts: