ಬೆಟಗೇರಿ:ಹಾಲಿನ ಡೈರಿಗಳಲ್ಲಿ ಮಾಸ್ಕ್, ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಕರಪತ್ರ ವಿತರಣೆ
ಹಾಲಿನ ಡೈರಿಗಳಲ್ಲಿ ಮಾಸ್ಕ್, ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಕರಪತ್ರ ವಿತರಣೆ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಎ 9 :
ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸ್ಥಳೀಯ ಕರೊನಾ ಸೈನಿಕರ ಮೂಲಕ ಗ್ರಾಮದ ತೋಟದ ನಿವಾಸಿಗಳಿಗೆ ಗುರುವಾರ ಏ.9 ರಂದು ಹಾಲಿನ ಡೈರಿಗಳಲ್ಲಿ ಉಚಿತವಾಗಿ ಮಾಸ್ಕ್, ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕರಪತ್ರವನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.
ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಅವರು ಸ್ಥಳೀಯರಿಗೆ ಮಾಸ್ಕ್ ವಿತರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಮಾತನಾಡಿ, ಜಗತ್ತಿನಾಧ್ಯಂತ ಕರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕರೋನಾ ಮಹಾಮಾರಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಮುಖಕ್ಕೆ ಮಾಸ್ಕ್ ಧರಿಸಬೇಕು ಎಂದು ಸ್ಥಳೀಯರಿಗೆ ತಿಳಿಸಿದ್ದಾರೆ.
ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ಶ್ರೀಧರ ದೇಯಣ್ಣವರ, ಬಸವರಾಜ ಪಣದಿ, ಶಿವಾನಂದ ಐದುಡ್ಡಿ ಸೇರಿದಂತೆ ಗ್ರಾಪಂ ಸದಸ್ಯರು, ಕರೊನಾ ಸೈನಿಕರು, ಗ್ರಾಪಂ ಸಿಬ್ಬಂದಿ, ಮತ್ತೀತರರು ಇದ್ದರು.