RNI NO. KARKAN/2006/27779|Thursday, November 7, 2024
You are here: Home » breaking news » ಗೋಕಾಕ :ಬೇಕಾಬಿಟ್ಟಿಯಾಗಿ ತಿರುಗಾಡುತ್ತಿರುವವರಿಗೆ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಕ್ಲಾಸ್

ಗೋಕಾಕ :ಬೇಕಾಬಿಟ್ಟಿಯಾಗಿ ತಿರುಗಾಡುತ್ತಿರುವವರಿಗೆ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಕ್ಲಾಸ್ 

ಬೇಕಾಬಿಟ್ಟಿಯಾಗಿ ತಿರುಗಾಡುತ್ತಿರುವವರಿಗೆ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಕ್ಲಾಸ್

 

 
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಮೇ 8 :

 

 

 

ಲಾಕ್‍ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಅವರು ಶುಕ್ರವಾರದಂದು ಗ್ರಾಮದಲ್ಲಿ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿರುವವರಿಗೆ ಕರೊನಾ ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ತಾಕೀತು ಮಾಡಿದರು.

ಗ್ರಾಮದ ಪ್ರಮುಖ ಸ್ಥಳ ಸೇರಿದಂತೆ ಪೊಲೀಸ್ ಚೆಕ್ ಪೋಸ್ಟಕ್ಕೆ ಭೇಟಿ ನೀಡಿದ ಅವರು ಕಡ್ಡಾಯವಾಗಿ ಮಾಸ್ಕ ಧರಿಸಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ ಜಾಗೃತಿ ಮೂಡಿಸಿದರು

ಗ್ರಾಮಲೆಕ್ಕಾಧಿಕಾರಿ ಜೆ.ಎಮ್.ನದಾಫ್, ಜಗದೀಶ ಹೊಳ್ಳಿಕೇರಿ, ಪೊಲೀಸ್ ಚೆಕ್ ಪೋಸ್ಟ ಸಿಬ್ಬಂದಿಗಳಾದ ಎಸ್.ಆರ್.ಕಿಚಡಿ, ವಿ.ಆರ್.ಬೂದಿ, ಕುಲಗೋಡ ಪೊಲೀಸ್ ಪೇದೆ ಬಿ.ಬಿ.ಬಿರಾದಾರ, ನಾಗಪ್ಪ ದುರದುಂಡಿ ಅವರು ಸಹ ಜೋತೆಯಾಗಿ ಸ್ಥಳೀಯ ಪೊಲೀಸ್ ಚೆಕ್ ಪೋಸ್ಟನಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಕರೊನಾ ವೈರಸ್ ಸಂಪೂರ್ಣ ನಿವಾರಣೆಯಾಗಿಲ್ಲ, ಸದ್ಯ ಲಾಕ್‍ಡೌನ್ ಮಾತ್ರ ಸ್ವಲ್ಪ ಸಡಿಲಿಕೆಯಾಗಿದೆ. ಇನ್ನೂ ಒಂದು ವರ್ಷದ ತನಕ ಪ್ರತಿಯೊಬ್ಬರೂ ಮನೆಯಿಂದ ಹೊರಗಡೆ ಬರುವಾಗ ತಪ್ಪದೇ ಮಾಸ್ಕ್ ಧರಿಸುವಂತೆ, ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಂಡು ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ಅನುಸರಿಸುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು.

Related posts: