RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ತುರ್ತು ಪರಿಸ್ಥಿತಿ ಹೇರಿದ್ದ ಕರಾಳ ದಿನಾಚರಣೆಯ ಅಂಗವಾಗಿ ಬಿಜೆಪಿಯಿಂದ ವಿಡಿಯೋ ಕಾನ್ಫರೆನ್ಸ್

ಗೋಕಾಕ:ತುರ್ತು ಪರಿಸ್ಥಿತಿ ಹೇರಿದ್ದ ಕರಾಳ ದಿನಾಚರಣೆಯ ಅಂಗವಾಗಿ ಬಿಜೆಪಿಯಿಂದ ವಿಡಿಯೋ ಕಾನ್ಫರೆನ್ಸ್ 

ತುರ್ತು ಪರಿಸ್ಥಿತಿ ಹೇರಿದ್ದ ಕರಾಳ ದಿನಾಚರಣೆಯ ಅಂಗವಾಗಿ ಬಿಜೆಪಿಯಿಂದ ವಿಡಿಯೋ ಕಾನ್ಫರೆನ್ಸ್

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 25 :

 

 

1975ರ ಜೂನ್ 25ರಂದು ಸ್ವತಂತ್ರ ಭಾರತದ ಚರಿತ್ರೆಯಲ್ಲೆ ದೇಶದದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಕರಾಳ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ವಿಡಿಯೋ ಕಾನ್ಫರೆನ್ಸ್ ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿತು.
ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ತುರ್ತುಪರಿಸ್ಥಿತಿ ಸ್ಕ್ರೀನ್ ಮುಖಾಂತರ ಕಾರ್ಯಕರ್ತರು ವೀಕ್ಷಿಸಿದರು.
ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ,ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ರಾಜ್ಯ ಸರ್ಕಾರ ಸಚಿವರಾದ ಶ್ರೀ ಬಿ ಸಿ ಪಾಟೀಲರು ಸ್ಕ್ರೀನ್ ಮುಖಾಂತರ ಎಲ್ಲ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಭೀಮಶಿ ಭರಮನ್ನವರ ಮತ್ತು ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ ಮತ್ತು ಮುಖಂಡರಾದ ಸುರೇಶ ಸನದಿ ಸೇರಿದಂತೆ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts: