ಗೋಕಾಕ:ರಾಜೀವಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಭೂಮಿ ಪೂಜಾ ಕಾರ್ಯಕ್ರಮ
ರಾಜೀವಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಭೂಮಿ ಪೂಜಾ ಕಾರ್ಯಕ್ರಮ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಜು 26 :
ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹಾಗೂ ಸ್ಥಳೀಯ ಹಿರಿಯ ನಾಗರಿಕರ ಮಾರ್ಗದರ್ಶನದಲ್ಲಿ ಇಲ್ಲಿಯ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಈಗಾಗಲೇ ಬೆಟಗೇರಿ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ರವಿವಾರ ಜು.26 ರಂದು ನಡೆದ ರಾಜೀವಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಭೂಮಿ ಪೂಜಾ ಕಾರ್ಯಕ್ರವದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯ ಅನುದಾನದಲ್ಲಿ ಸುಮಾರು 16.25 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನ ಭವ್ಯ ಕಟ್ಟಡ ನಿರ್ಮಾಣವಾಗಲಿದೆ ಎಂದರು.
ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅವರು ನೂತನ ಕಟ್ಟಡ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿದರು. ನಿಂಗಯ್ಯ ಮಠದ ಸಾನಿಧ್ಯ ವಹಿಸಿದ್ದರು. ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ಪಿಕೆಪಿಎಸ್ ಮಾಜಿ ಅಧ್ಯಕ್ಷ ರಾಮಣ್ಣ ಬಳಿಗಾರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಗ್ರಾಮದ ಹಿರಿಯ ನಾಗರಿಕರಾದ ಮಾಯಪ್ಪ ಬಾಣಸಿ, ಬಸವರಾಜ ಪಣದಿ, ಲಕ್ಷ್ಮಣ ಸೋಮಗೌಡ್ರ, ವೈ.ಸಿ.ಶೀಗಿಹಳ್ಳಿ, ಗುತ್ತಿಗೆದಾರ ಲಕ್ಷ್ಮಣ ಯಮಕನಮರಡಿ, ಕಾರ್ಯದರ್ಶಿ ಪರಶುರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಸುರೇಶ ಬಾಣಸಿ, ವಿಠಲ ಚಂದರಗಿ, ಈರಪ್ಪ ದಂಡಿನ, ಶಿವಾನಂದ ಐದುಡ್ಡಿ ಸೇರಿದಂತೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಸಿಬ್ಬಂದಿ, ಹಿರಿಯ ನಾಗರಿಕರು, ಗ್ರಾಮಸ್ಥರು ಇದ್ದರು.