RNI NO. KARKAN/2006/27779|Thursday, November 7, 2024
You are here: Home » breaking news » ಗೋಕಾಕ:ಖಾಸಗಿ ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಗೆ ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ

ಗೋಕಾಕ:ಖಾಸಗಿ ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಗೆ ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ 

ಖಾಸಗಿ ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಗೆ ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ

 

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 28 :
ಕೊರನಾ ಸೋಂಕಿನಿಂದ ರಾಜ್ಯದಲ್ಲಿನ ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಸ್ರಾರು ಶಿಕ್ಷಕರ ಬದುಕು ಬೀದಿಗೆ ಬಿದ್ದಿದ್ದು, ಅವರಿಗೆ ವಿಶೇಷ ಪ್ಯಾಕೇಜ್ ಕಲ್ಪಿಸುವಂತೆ ಒತ್ತಾಯಿಸಿ ಇಲ್ಲಿನ ತಾಲೂಕ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘದವರು ಮಂಗಳವಾರದಂದು ನಗರದ ಸಚಿವರ ಕಾರ್ಯಲಯದಲ್ಲಿ ಸಚಿವರಿಗೆ ಬೇಟಿಯಾಗಿ ಮನವಿ ಸಲ್ಲಿಸಿದರು.

ಅನುದಾನ ರಹಿತ ಶಾಲೆಗಳ ಶಿಕ್ಷಕರು ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಪರದಾಡುತ್ತಿದ್ದಾರೆ. ಮಕ್ಕಳಿಗೆ ಶಿಕ್ಷಣ ನೀಡಿ ಅವರನ್ನು ಉತ್ತಮ ನಾಗರಿಕನಾಗಿ ಸುವ ಶಿಕ್ಷಕರು ತಮ್ಮ ಕುಟುಂಬದ ತುತ್ತಿನ ಚೀಲ ತುಂಬಿಸಲು ಹರಸಾಹಸ ಪಡುವಂತಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಶಿಕ್ಷಕರು ಕುಟುಂಬ ನಿರ್ವಹಣೆಗೆ ಕಂಡಕಂಡವರ ಮುಂದೆ ಸಾಲಕ್ಕಾಗಿ ಕೈಚಾಚುವ ದುಸ್ಥಿತಿ ಬಂದೋದಗಿದೆ ಆದ್ದರಿಂದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಸರಕಾರ ಮಟ್ಟದಲ್ಲಿ ಪ್ರಯತ್ನಿಸಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ಶಿಕ್ಷಕರಾದ ಆರ ಎಸ್ ಕಾಕಡೆ, ಎಸ್ ಕೆ ಮಠದ, ಆರ್ ಎಂ ಹೇರಲಗಿ . ಎಸ್ ಕೆ ಇಂಗಳೆ,ಬಿ ಎಚ್ ಬೀರ್ ಗೌಡರ್, ಹಾಗೂ ನಗರದ ಪ್ರಮುಖ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಉಪಸ್ಥಿತರಿದ್ದರು

Related posts: