RNI NO. KARKAN/2006/27779|Thursday, November 7, 2024
You are here: Home » breaking news » ಬೆಳಗಾವಿ:ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬೆಳಗಾವಿ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳಗಾವಿ:ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬೆಳಗಾವಿ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ 

ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬೆಳಗಾವಿ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ
ಮನವಿ

 

ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಅ 12 :

 

ಜಿಲ್ಲೆಯಲ್ಲಿ ಈಚೇಗೆ ನಕಲಿ ಪತ್ರಕರ್ತರ ಹಾವಳಿ ಹೆಚ್ಚುತ್ತಿದೆ. ಮಾಧ್ಯಮ ಪಟ್ಟಿಯಲ್ಲಿ ಸುದ್ದಿ ಸಂಸ್ಥೆಯ ಹೆಸರು ಇಲ್ಲದೇ ಇರುವ ಪತ್ರಿಕೆ ಹೆಸರು ಹಾಗೂ ವೆಬ್ ಚಾನಲ್ ಸೈಟ್‍ಗಳ ಹೆಸರಿನಲ್ಲಿ ಅಧಿಕಾರಿಗಳಿಗೆ ಜನರಿಗೆ ವಂಚನೆ ಮಾಡುತ್ತಿರುವ ಪ್ರಕರಣಗಳು ಇತ್ತಿಚಿಗೆ ಹೆಚ್ಚುತ್ತಿವೆ. ಇದರಿಂದಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಿಗೆ ಮುಜುಗರ ಪಡುವಂತಾಗಿದೆ. ಆದ್ದರಿಂದ ಮಾಧ್ಯಮ ಪಟ್ಟಿಯಲ್ಲಿರುವ ಸುದ್ದಿ ಸಂಸ್ಥೆಗಳ ಪ್ರತಿನಿಧಿಗಳನ್ನು ಹೊರತುಪಡಿಸಿ, ನಕಲಿ ಪತ್ರಕರ್ತರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಮಾಧ್ಯಮ ಪ್ರತಿನಿಧಿಗಳು ವಾರಿಯರ್ಸ್, ಯಾವುದೇ ಕಾರಣಕ್ಕೆ ಆತಂಕಪಡುವ ಅಗತ್ಯವಿಲ್ಲ. ಪ್ರತಕರ್ತರ ರಕ್ಷಣೆಗೆ ಹಾಗೂ ಹಲ್ಲೆ ಕೋರರ ವಿರುದ್ಧ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಬದ್ಧವಾಗಿದೆ. ಅಲ್ಲದೇ ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಈ ಸಂಬಂಧ ಶೀಘ್ರವೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಪತ್ರರ್ಕರ ಸಂಘದ ಅಧ್ಯಕ್ಷ ಶ್ರೀಶೈಲ ಮಠದ, ಕಾರ್ಯಾಧ್ಯಕ್ಷ ಕುಂತಿನಾಥ ಕಲಮನಿ, ಸುರೇಶ ನೇರ್ಲಿ, ಮಂಜುನಾಥ ಕೋಳಿಗುಡ್ಡ, ರಾಜಶೇಖರಯ್ಯ ಹಿರೇಮಠ, ಜಗದೀಶ ವಿರಕ್ತಮಠ, ಸುನೀಲ ಪಾಟೀಲ, ಹಿರಮಾಣಿ ಕಂಗ್ರಾಳಕರ, ಅರುಣ ಯಳ್ಳೂರಕರ, ವಿಜಯ ಮೋಹಿತೆ, ಚಂದ್ರಕಾಂತ ಸುಗಂಧಿ, ಮಹಾಂತೇಶ ಕುರಬೇಟ, ಶ್ರೀಧರ ಕೋಟಾರಗಸ್ತಿ, ಜಿತೇಂದ್ರ ಕಾಂಬಳೆ, ಅಡಿವೇಶ ಪಾಟೀಲ, ಸುನಿಲ್ ಗಾವಡೆ, ಅನಿಲ ಕಾಜಗಾರ, ಸುಬಾನಿ ಮುಲ್ಲಾ, ರವಿರಾಜ್, ವಿಶ್ವನಾಥ ದೇಸಾಯಿ, ಅಶೋಕ ಮಗದುಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು.

Related posts: