RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ : ಜಿಲ್ಲಾಧಿಕಾರಿ ಎಂ ಜಿ ಹಿರೇಮಠ

ಗೋಕಾಕ:ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ : ಜಿಲ್ಲಾಧಿಕಾರಿ ಎಂ ಜಿ ಹಿರೇಮಠ 

ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ : ಜಿಲ್ಲಾಧಿಕಾರಿ ಎಂ ಜಿ ಹಿರೇಮಠ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 18 :

 

ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತದಿಂದ ಎಲ್ಲ ರೀತಿಯ ಅವಶ್ಯಕ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದರು.

ಸೋಮವಾರದಂದು ನಗರದಲ್ಲಿ ಪ್ರವಾಹ ಪರಿಸ್ಥಿತಿಯನ್ನು ವಿಕ್ಷೀಸಿದ ನಂತರ ಪತ್ರಕರ್ತರ ಜೊತೆ ಮಾತನಾಡಿ, ಈಗಾಗಲೇ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಲು ನೂಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಗೋಕಾಕ ತಾಲೂಕಿನಲ್ಲಿ ನಗರ ಸೇರಿದಂತೆ 30 ಗಂಜಿ ಕೇಂದ್ರ ಆರಂಭಿಸಲು ಸ್ಥಳಗಳನ್ನು ನಿಗದಿಪಡಿಸಲಾಗಿದೆ. 6 ಯಾಂತ್ರಿಕೃತ ಬೋಟಗಳು, ಎನ್.ಡಿ.ಆರ್.ಎಫ್ ತಂಡವರ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಸಾರ್ವಜನಿಕರು ಹೆದರುವ ಅವಶ್ಯಕತೆ ಇಲ್ಲ. ಒಂದು ವೇಳೆ ಗೋಕಾಕ ತಾಲೂಕಿನಲ್ಲಿ ಪ್ರವಾಹ ಸಂಭವಿಸಿದರೆ ಸುಮಾರು 10 ರಿಂದ 14 ಹಳ್ಳಿಗಳಲ್ಲಿ ಭಾಗಶಃ ಮುಳುಗಡೆಗೊಳ್ಳುವ ಸಂಭವವಿದ್ದು, ನದಿ ತೀರದಲ್ಲಿ ವಾಸಿಸುವವರಿಗೆ ಸುರಕ್ಷಿತ ಸ್ಥಳಗಳಲ್ಲಿ ತೆರಳಲು ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು 17ಜನರ ಎನ್.ಡಿ.ಆರ್.ಎಫ್ ತಂಡ ನಗರಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಅವರಿಗೆ ಕಾರ್ಯ ಹಂಚಿಕೆ ಮಾಡಲಾಗುವದಲ್ಲದೆ ಅಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸಕಲ ತಯಾರಿಗಳನ್ನು ಮಾಡಿಕೊಂಡಿದ್ದಾರೆ ತಿಳಿಸಿದರು.
ಕೊರೋನಾ ಸಂಬಂಧ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕೊರೋನಾ ಅಂತಾ ದೊಡ್ಡ ರೋಗವೆನ್ನೆಲ್ಲಾ ಯಾರು ಭಯಪಡದೆ ಸಾಮಾಜಿಕ ಅಂತರ, ಮಾಸ್ಕ ಧರಿಸುವಂತಹ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಕೊರೋನಾ ಸೋಂಕನ್ನು ಗೆಲ್ಲಬಹುದು. ಈಗಾಗಲೇ ಕೊರೋನಾ ರ್ಯಾಪೀಡ್ ಪರೀಕ್ಷೆಯನ್ನು ಮಾಡುವ ವ್ಯವಸ್ಥೆಯನ್ನು ಮಾಡಲಾಗಿದ್ದು, ತಾಲೂಕಾ ಮಟ್ಟದ ಆಸ್ಪತ್ರೆಗಳಲ್ಲಿ ದಿನಕ್ಕೆ 300ರಂತೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ರೋಗ ಲಕ್ಷಣ ಕಂಡು ಬಂದರೇ ಯಾರು ಭಯಪಡದೇ ತಕ್ಷಣ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಸಾಕಷ್ಟು ಜನರು ಗುಣಮುಖರಾಗಿ ಮರಳುತ್ತಿದ್ದಾರೆ ಎಂದು ತಿಳಿಸಿದ ಅವರು ಖಾಸಗಿ ಆಸ್ಪತ್ರೆಯಲ್ಲಿಯೂ ಸಹ ಚಿಕಿತ್ಸೆ ನೀಡಲು ತಿಳಿಸಲಾಗಿದೆ. ವೈದ್ಯರು ಸಹ ಕೊರೋನಾ ಸೋಂಕಿತರನ್ನು ಉಪಚರಿಸಲು ಹಿಂದೆಟು ಹಾಕದೆ ಮುಂದೆ ಬಂದು ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ ತಿಳಿಸಿದರು. 
ಇಲ್ಲಿಯ ಸಾರ್ವಜನಿಕ ಸ್ಮಶಾನದಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೇ ಅಂತ್ಯಕ್ರೀಯೆ ನಡೆಸಲು ತೊಂದರೆಗಳುಯಾಗುತ್ತಿವೆ. ಸರಿಯಾದ ರಸ್ತೆ, ವಿದ್ಯುತ್ತ ದೀಪಗಳು ಇಲ್ಲವೆಂದು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಮುಂದೆ ದೂರಿದಾಗ ತಕ್ಷಣವೇ ಸ್ಥಳದಲ್ಲಿದ್ದ ಪೌರಾಯುಕ್ತರನ್ನು ಸಮಸ್ಯೆಯನ್ನು ಶೀಘ್ರದಲ್ಲಿ ಬಗೆ ಹರಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ, ಕಂದಾಯ ನಿರೀಕ್ಷಕ ಎಸ್.ಎನ್.ಹಿರೇಮಠ, ಸ್ಥಳೀಯರಾದ ಮಾಯಪ್ಪ ತಹಶೀಲದಾರ, ಕರೆಪ್ಪ ಬಡೆಪ್ಪಗೋಳ, ರಾಮಣ್ಣ ಮಲ್ಲಾಪೂರೆ, ಮಾಯಪ್ಪ ತುಳಜನ್ನವರ ಸೇರಿದಂತೆ ಅನೇಕರು ಇದ್ದರು.

Related posts: