RNI NO. KARKAN/2006/27779|Thursday, November 7, 2024
You are here: Home » breaking news » ಗೋಕಾಕ:ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ರಾಜ್ಯಪಾಲರಿಗೆ ಮನವಿ ಅರ್ಪಣೆ : ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಗೈರು

ಗೋಕಾಕ:ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ರಾಜ್ಯಪಾಲರಿಗೆ ಮನವಿ ಅರ್ಪಣೆ : ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಗೈರು 

ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ರಾಜ್ಯಪಾಲರಿಗೆ ಮನವಿ ಅರ್ಪಣೆ : ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಗೈರು

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 20 :

 

ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗುರುವಾರದಂದು ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಹಮ್ಮಿಕೊಂಡಿದ್ದರ ಪರಿಣಾಮ ಗೋಕಾಕ ನಗರದಲ್ಲಿಯೂ ಸಹ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಪ್ರತಿಭಟನಾ ಹೋರಾಟದಲ್ಲಿ ಕಾಂಗ್ರೆಸ್ ಯುವ ಮುಖಂಡ ಲಖನ್ ಜಾರಕಿಹೊಳಿ ಮತ್ತು ನಗರಸಭೆ ಸದಸ್ಯರ ಗೈರಾಜರಾಗಿದ್ದರು .

ಬ್ಲಾಕ್ ಕಾಂಗ್ರೆಸನ ನಗರ ಘಟಕ, ಗ್ರಾಮೀಣ ಘಟಕ, ಎಸ್.ಟಿ ನಗರ ಘಟಕ, ಕಿಶಾನ ಶೆಲ್ ನಗರ ಘಟಕ , ಅಲ್ಪ ಸಂಖ್ಯಾತರ ಘಟಕ , ಮಹಿಳಾ ಗ್ರಾಮೀಣ ಘಟಕ, ಯುವ ಘಟಕದ ಅಧ್ಯಕ್ಷರುಗಳು ಮತ್ತು ಅವರ ಬೆರೆಳೆನಕೆಯ ಬೆಂಬಲಿಗರು ಮಾತ್ರ ಪ್ರತಿಭಟನೆ ನಡೆಯಿಸಿ ಸರಕಾರಕ್ಕೆ ಮನವಿ ಅರ್ಪಿಸಿದರು.
ಗುರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ , ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು. ರೈತ ವಿರೋಧಿ, ಭೂಸುಧಾರಣಾ ತಿದ್ದುಪಡಿ, ಕಾಯ್ದೆ ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ವಾಪಸ ತಗೆದುಕೊಂಡು , ರಾಜ್ಯದಲ್ಲಿ ಅತಿವೃಷ್ಟಿಯಿಂದ ತೀವ್ರ ಹಾನಿ ಒಳಗಾದವರಿಗೆ ಪರಿಹಾರ , ಕೊರೋನಾ ನಿಯಂತ್ರಿಸಲು ಖರೀದಿಸಿದ ಸಾಮಾಗ್ರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವದನ್ನು ತಕ್ಷಣ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರವಾಗಿ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಕಾಂಗ್ರೆಸ್ ಹೋರಾಟಕ್ಕೆ ಯುವ ಧುರೀಣ ಲಖನ್ ಗೈರು : ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಕೈಗೊಂಡ ಹೋರಾಟಕ್ಕೆ ಕಾಂಗ್ರೆಸ್ ಯುವ ಮುಖಂಡ ಲಖನ್ ಜಾರಕಿಹೊಳಿ ಮತ್ತು ನಗರಸಭೆ ಸದಸ್ಯರು ಗೈರು ಹಾಜರಾಗಿದ್ದು ಎದ್ದು ಕಾಣುತ್ತಿತ್ತು . ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಗಳೂರು ನಗರದ ಗೃಹ ಪ್ರವೇಶದ ನಂತರ ಕಾಂಗ್ರೆಸ್ ಯುವ ಧುರೀಣ ಲಖನ ಜಾರಕಿಹೊಳಿ ಅವರು ಬಹಿರಂಗವಾಗಿ ಬಿಜೆಪಿ ಪಕ್ಷದ ವಿರುದ್ಧ ಎಲ್ಲಿಯೂ ಮಾತನಾಡದಿರುವದು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಜೊತೆಗೆ ಬಹಿರಂಗವಾಗಿ ಕಾಣಿಸಕೊಳ್ಳದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ . ಅಲ್ಲದೆ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಈ ಮೃದು ರಾಜಕೀಯ ನಡೆ ಗೋಕಾಕ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರ ಉಂಟುಮಾಡಿದೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ, ಜಾಕೀರ ನಧಾಫ , ಪ್ರಕಾಶ ಡಾಂಗೆ , ಪರಸಪ್ಪಾ ತಿಮ್ಮಯ್ಯನವರ, ವಿಜಯ ಅರಭಾವಿ , ಜಹಾಂಗಿರ ಜಮಾದರ , ಶ್ರೀಮತಿ ಮಂಜುಳಾ ರಾಮಗಾನಟ್ಟಿ, ಮಹಾದೇವ ಜಾಗನೂರ , ಇಮ್ರಾನ್ ತಪಕೀರ , ರವಿ ನಾವಿ, ರಹೇಮಾನ ಮೋಕಾಶಿ ಇದ್ದರು.

Related posts:

ಗೋಕಾಕ:ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸು ವಿಕಾಸಗೊಳ್ಳುತ್ತದೆ : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ

ಗೋಕಾಕ:ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು : ಕಾಯಕಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಕಿರಣ ಬೇಡಿ

ಗೋಕಾಕ:ಅಧಿಕಾರಕ್ಕೆ ರಾಜಿಯಾಗದೆ ಮೊದಲು ಜಾತಿ ಗಣತಿ ವರದಿ ಜಾರಿ ಮಾಡಿ’ ಎಂದಿರುವ ಹರಿಪ್ರಸಾದ್ ಅವರ ಹೇಳಿಕೆ ಸ್ವಾಗತಾರ್ಹ …