ಗೋಕಾಕ:ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಳಗಾವಿ ಪ್ರವಾಸ ಮುಂದೂಡಿಕೆ : ಶಾಸಕ ಸತೀಶ ಮಾಹಿತಿ
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಳಗಾವಿ ಪ್ರವಾಸ ಮುಂದೂಡಿಕೆ : ಶಾಸಕ ಸತೀಶ ಮಾಹಿತಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 23 :
ಅಗಸ್ಟ . 24 ಮತ್ತು 25 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೆರೆ ಸಮೀಕ್ಷೆ ಮಾಡಲು ಹಮ್ಮಿಕೊಂಡಿದ್ದ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ನೆರೆ ವಿಕ್ಷಣೆ ಪ್ರವಾಸವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಅವರು
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿ.ಕೆ.ಶಿವಕುಮಾರ ಬೆಳಗಾವಿ ಆಗಮಿಸಿ ನೆರೆಯ ಸಮೀಕ್ಷೆ ನಡೆಸಿ ಜನರಿಗೆ ದೈರ್ಯ ತುಂಬಲು ಬೆಳಗಾವಿ ಹಾಗೂ ಬಾಗಲಕೋಟ ಜಿಲ್ಲೆಗಳಿಗೆ ಭೇಟಿ ನೀಡಲಿದ್ದರು . ಕಾರಣಾಂತರಗಳಿಂದ ಅಧ್ಯಕ್ಷರ ಜಿಲ್ಲಾ ಪ್ರವಾಸವನ್ನು ಮುಂದೂಡಲಾಗಿದ್ದು, ಬದಲಾದ ಪ್ರವಾಸದ ವಿವರವನ್ನು ಆದಷ್ಟು ಬೇಗ ತಿಳಿಸಲಾಗುವದು ಎಂದು ಶಾಸಕರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲವ ಒಂದು ದಿನ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬೆಳಗಾವಿ ಅದರಲ್ಲೂ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದ ಪ್ರವಾಹ ಪ್ರದೇಶಗಳಲ್ಲಿಗೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಂಡಿದ್ದರು ಆದರೆ ಏಕಾಏಕಿ ಕೆಪಿಸಿಸಿ ಅಧ್ಯಕ್ಷರ ಬೆಳಗಾವಿ ಜಿಲ್ಲಾ ಪ್ರವಾಸ ರದ್ದಾಗಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿ ಕೊಟ್ಟಿದೆ.