RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಶ್ರೀಪತಿ ಗಣೇಶವಾಡಿ ಅವಿರೋಧವಾಗಿ ಆಯ್ಕೆ

ಗೋಕಾಕ:ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಶ್ರೀಪತಿ ಗಣೇಶವಾಡಿ ಅವಿರೋಧವಾಗಿ ಆಯ್ಕೆ 

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಶ್ರೀಪತಿ ಗಣೇಶವಾಡಿ ಅವಿರೋಧವಾಗಿ ಆಯ್ಕೆ

 

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 21 :

 
ಇಲ್ಲಿಯ ಎಪಿಎಂಸಿ ಅಧ್ಯಕ್ಷ ಶ್ರೀಪತಿ ಹಾಲಪ್ಪ ಗಣೇಶವಾಡಿ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ನಡೆಯಬೇಕಾಗಿದ್ದ ಈ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಶ್ರೀಪತಿ ಗಣೇಶವಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಗೋಕಾಕ ತಾಲೂಕಿನ ಗಣೇಶವಾಡಿ ಗ್ರಾಮದವರಾದ ಗಣೇಶವಾಡಿ ಅವರು, ಗೋಕಾಕ ಎಪಿಎಂಸಿಗೆ ಮೊದಲ ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿ ನಂತರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಗ ಬೆಂಗಳೂರಿನ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಬೆಳಗಾವಿ ಜಿಲ್ಲೆಯಿಂದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ಶಾಸಕ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಆನಂದ ಮಾಮನಿ, ಮಹಾದೇವಪ್ಪ ಯಾದವಾಡ, ಎಂಎಲ್‍ಸಿ ಹಾಗೂ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ್ ಪಾಟೀಲ, ಎಪಿಎಂಸಿ ಸಮಸ್ತ ನಿರ್ದೇಶಕರುಗಳು ನೂತನವಾಗಿ ಆಯ್ಕೆಯಾಗಿರುವ ಗಣೇಶವಾಡಿ ಅವರನ್ನು ಅಭಿನಂದಿಸಿದ್ದಾರೆ.

Related posts: