ಗೋಕಾಕ:ಬಚ್ಚಲು ಗುಂಡಿ, ಪೌಷ್ಠಿಕ ತೋಟ ಹಾಗೂ ಅಣಬೆ ಬೇಸಾಯಗಳ ವಿಶೇಷ ಅಭಿಯಾನಕ್ಕೆ ಚಾಲನೆ
ಬಚ್ಚಲು ಗುಂಡಿ, ಪೌಷ್ಠಿಕ ತೋಟ ಹಾಗೂ ಅಣಬೆ ಬೇಸಾಯಗಳ ವಿಶೇಷ ಅಭಿಯಾನಕ್ಕೆ ಚಾಲನೆ
ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಸೆ 24 :
ಸಮೀಪದ ತಪಸಿ ಗ್ರಾಮ ಪಂಚಾಯತಿ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಸಹಯೋಗದಲ್ಲಿ ಗುರುವಾರ ಸೆ.24 ರಂದು ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಬಚ್ಚಲು ಗುಂಡಿ, ಪೌಷ್ಠಿಕ ತೋಟ ಹಾಗೂ ಅಣಬೆ ಬೇಸಾಯಗಳ ವಿಶೇಷ ಅಭಿಯಾನಕ್ಕೆ ಚಾಲನೆ ಮತ್ತು ಅನುಷ್ಠಾನ ಕುರಿತು ತಿಳುವಳಿಕೆ ಮೂಡಿಸುವ ಪ್ರಚಾರ ಕಾರ್ಯಕ್ರಮ ನಡೆಯಿತು.
ಗ್ರಾಪಂ ಪಿಡಿಒ ಪರಶುರಾಮ ಇಟಗೌಡ್ರ ಮಾತನಾಡಿ, ಇಲ್ಲಿಯ ಗ್ರಾಮ ಪಂಚಾಯತ ಅಧಿಕಾರಿಗಳನ್ನು ಸ್ಥಳೀಯರು ಭೇಟಿಯಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮದ ಪ್ರಮುಖ ಸ್ಥಳ, ಬೀದಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಲವಾರು ಸೌಲಭ್ಯಗಳ ಕುರಿತು ಸ್ಥಳೀಯ ಗ್ರಾಪಂ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಂದ ಗ್ರಾಮಸ್ಥರಲ್ಲಿ ತಿಳುವಳಿಕೆ ಮೂಡಿಸುವ ಪ್ರಚಾರ ಕಾರ್ಯಕ್ರಮ ನಡೆಯಿತು.
ಗ್ರಾಪಂ ಪಿಡಿಒ ಪರಶುರಾಮ ಇಟಗೌಡ್ರ, ಬಸವರಾಜ ಸಾಯನ್ನವರ, ಬಸವರಾಜ ಬಾಣಸಿ, ಹನುಮಂತ ವಾಳದ ಸೇರಿದಂತೆ ಗ್ರಾಪಂ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಇದ್ದರು.