RNI NO. KARKAN/2006/27779|Wednesday, November 6, 2024
You are here: Home » breaking news » ಗೋಕಾಕ:ಕರೊನಾ ವೈರಸ್ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ : ಎಎಸ್‍ಐ ಬಿ.ವೈ.ಅಂಬಿ

ಗೋಕಾಕ:ಕರೊನಾ ವೈರಸ್ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ : ಎಎಸ್‍ಐ ಬಿ.ವೈ.ಅಂಬಿ 

ಕರೊನಾ ವೈರಸ್ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ : ಎಎಸ್‍ಐ ಬಿ.ವೈ.ಅಂಬಿ

 

 

ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಅ 13 :

 

ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳೀಯರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಎಎಸ್‍ಐ ಬಿ.ವೈ.ಅಂಬಿ ಹೇಳಿದರು.
ಬೆಳಗಾವಿ ಜಿಲ್ಲಾ ಪೊಲೀಸ್, ಗೋಕಾಕ ಉಪವಿಭಾಗ ಹಾಗೂ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಮಂಗಳವಾರ ಅ.13 ರಂದು ನಡೆದ ಕೋವಿಡ್-19 ನಿರ್ಮೂಲನಾ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರೂ ಮನೆಯಿಂದ ಹೊರಗಡೆ ಬರುವಾಗ ತಪ್ಪದೇ ಮಾಸ್ಕ್ ಧರಿಸುವಂತೆ, ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಂಡು ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ಅನುಸರಿಸುವಂತೆ ಸ್ಥಳೀಯ ಸಾರ್ವಜನಿಕರಿಗೆ ತಿಳಿಸಿದರು.
ಗ್ರಾಮದ ಪ್ರಮುಖ ಸ್ಥಳ, ಬೀದಿಗಳಲ್ಲಿ ಕುಲಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆಗಳ ನೇತೃತ್ವದಲ್ಲಿ ಕೋವಿಡ್-19 ನಿರ್ಮೂಲನಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಪೊಲೀಸ್ ಪೇದೆಗಳ ನೇತೃತ್ವದಲ್ಲಿ ಕೋವಿಡ್-19 ನಿರ್ಮೂಲನಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸ್ಥಳೀಯರು ತಪ್ಪದೇ ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ಅನುಸರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆ ಪಿಎಸ್‍ಐ ಹನಮಂತ ನರಳೆ ತಿಳಿಸಿದ್ದಾರೆ.
ಪೊಲೀಸ್ ಪೇದೆಗಳಾದ ವಿ.ಎಫ್.ಶೆಟ್ಟೆಪ್ಪನ್ನವರ, ವಿ.ಡಿ.ಹುದಲಿ, ಎನ್.ಜಿ.ದುರದುಂಡಿ, ಮುತ್ತೆಪ್ಪ ಕುರಬರ, ಸತ್ತೆಪ್ಪ ಮಾಳೇದ, ಮಾಯಪ್ಪ ಬಾಣಸಿ, ಹಜರತ್ ಮಿರ್ಜಾನಾಯ್ಕ, ದುಂಡಪ್ಪ ದಂಡಿನ, ಸುರೇಶ ದಂಡಿನ ಸೇರಿದಂತೆ ಸ್ಥಳೀಯರು ಇದ್ದರು.

Related posts: