ಗೋಕಾಕ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಕಾರ್ಯ ಮಾದರಿಯಾಗಿದೆ : ಜಿ.ಬಿ. ಬಳಗಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಕಾರ್ಯ ಮಾದರಿಯಾಗಿದೆ : ಜಿ.ಬಿ. ಬಳಗಾರ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 9 :
ಇಂದಿನ ಕೊರೋನಾ ಸಂಕಷ್ಟ ದಿನಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಟ್ಯಾಬ್ ಹಾಗೂ ಲ್ಯಾಪ್ – ಟ್ಯಾಫ್ ಗಳನ್ನು ವಿತರಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಕಾರ್ಯ ಮಾದರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ ಹೇಳಿದರು
ಸೋಮವಾರದಂದು ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಾರ್ಯಾಲಯದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಅಂತರ ಜಾಲ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಜ್ಞಾನ ತಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು .
ಗ್ರಾಮೀಣ ಪ್ರದೇಶದ ಜನರ ಬದುಕನ್ನು ಹಸನಗೋಳಿಸಲು ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಯೋಜನಾ ಸಂಸ್ಥೆಯ ಧರ್ಮಧರ್ಶಿ ವಿರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಶ್ರಮಿಸುತ್ತಿದೆ. ಜನತೆ ಆರ್ಥಿಕವಾಗಿ ಸದೃಢವಾಗಲು ಹಲವಾರು ಯೋಜನೆಗಳನ್ನು ಅನುಷ್ಠಾನ ಗೋಳಿಸುತ್ತಿದೆ. ಇಂದು ವಿದ್ಯಾರ್ಥಿಗಳಿಗೆ ಅಂತರಜಾಲ ಶಿಕ್ಷಣದ ಅವಶ್ಯಕತೆಯನ್ನು ಮನಗಂಡು ಅವರಿಗೆ ಲ್ಯಾಪ್ – ಟ್ಯಾಫ್ ಹಾಗೂ ಟ್ಯಾಬ್ ಗಳನ್ನು ರಿಯಾಯಿತಿ ದರದಲ್ಲಿ ನೀಡಿ ಅವರ ಶೈಕ್ಷಣಿಕ ಬೆಳವಣಿಗೆಗೆ ಈ ವಿಶೇಷ ಯೋಜನೆಯನ್ನು ಅನುಷ್ಠಾನ ಗೋಳಿಸುತ್ತಿರುವುದು ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳು ಇವುಗಳ ಸದುಪಯೋಗದಿಂದ ಸಮಾಜಕ್ಕೆ ಬೆಳಕಾಗಿ ಜೀವನವನ್ನು ಉಜ್ವಲ ಗೋಳಿಸಿಕೋಳ್ಳಿರೆಂದು ಕರೆ ನೀಡಿದರು.
ಸಂಸ್ಥೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಮಾತನಾಡಿ ವಿದ್ಯಾರ್ಥಿಗಳಿಗೆ ಲ್ಯಾಪ್ – ಟ್ಯಾಫ ಮತ್ತು ಟ್ಯಾಬಗಳನ್ನು ವಿತರಿಸುವ ಈ ಕಾರ್ಯಕ್ರಮಕ್ಕೆ ಹಲವು ತಯಾರಿಕ ಸಂಸ್ಥೆಗಳು ಉದಾರತೆಯಿಂದ ರಿಯಾಯಿತಿ ದರದಲ್ಲಿ ಒದಗಿಸಲು ಒಪ್ಪಿಕೊಂಡಿವೆ. ಪ್ರತಿ ಲ್ಯಾಪ್ಟಾಪ್ ಗೆ 6 ಸಾವಿರ , ಟ್ಯಾಬ್ ಗೆ 4 ಸಾವಿರ ಅನುದಾನವನ್ನು ಸಂಸ್ಥೆಯಿಂದ ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆ ಗೌರವ ಶಿಕ್ಷಕರ ನಿರ್ವಹಣೆ ಅನುಷ್ಠಾನದ ಜವಾಬ್ದಾರಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹೊತ್ತುಕೊಂಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಸೋಮಶೇಖರ್ ಮಗದುಮ್ಮ , ಕ್ಷೇತ್ರ ಯೋಜನಾಧಿಕಾರಿ ಮಮತಾ , ಜಿಲ್ಲಾ ಅಡಿಟ್ ಪ್ರಬಂಧಕ ಭರತ ಇದ್ದರು.