ಗೋಕಾಕ:ಜಲಸಂಪನ್ಮೂಲ ಸಚಿವರ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ
ಜಲಸಂಪನ್ಮೂಲ ಸಚಿವರ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 31 :
ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡುವರು. ನಂತರ ಮಧ್ಯಾಹ್ನ 1 ಗಂಟೆಗೆ ಅಲ್ಲಿಂದ ಬೆಳಗಾವಿಗೆ ತೆರಳಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಹಾಗೂ ಕಾರ್ಯಕರ್ತರ ಕುಂದು ಕೊರತೆಗಳನ್ನು ವಿಚಾರಿಸುವರು. ಸಂಜೆ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು.
ದಿ. 3 ರಂದು ಮುಂಜಾನೆ 11 ಗಂಟೆಹೆ ನಗರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಗೋಕಾಕದಲ್ಲಿ ವಾಸ್ತವ್ಯ. ದಿ. 4 ರಂದು ಮುಂಜಾನೆ 8 ಗಂಟೆಗೆ ಗೋಕಾಕದಿಂದ ರಸ್ತೆ ಸಂಚಾರದ ಮೂಲಕ ಮಹಾರಾಷ್ಟ್ರದ ಪುಣೆಯಲ್ಲಿ ಜರುಗುವ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲಿಯೇ ವಾಸ್ತವ್ಯ ಮಾಡುವರು. ದಿ. 5 ರಂದು ಪುಣೆಯಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತಕಾರ್ಯದರ್ಶಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.