RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ ಪ್ರಕಾಶ

ಗೋಕಾಕ:72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ ಪ್ರಕಾಶ 

72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ ಪ್ರಕಾಶ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 26 :

 

ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.
ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು.
ಪ್ರವಾಹ ಮತ್ತು ಕೋವಿಡ್-19 ದಿಂದ ತತ್ತರಿಸಿದ ತಾಲೂಕು ಇದೀಗ ಸಾಮಾನ್ಯ ಸ್ಥಿತಿಗೆ ಮರಳುತ್ತಿರುವುದು ಸಂತಸದ ವಿಷಯವಾಗಿದೆ. ಸರ್ಕಾರದ ಮಾರ್ಗಸೂಚಿಯ ಪ್ರಕಾರ ಈಗಾಗಲೇ ಕೋವಿಶಿಲ್ಡ್ ಲಸಿಕಾಕರಣ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಒಳ್ಳೆಯ ಆರೋಗ್ಯ ದೊರೆತು ಸದೃಢ ಸಮಾಜ ನಿರ್ಮಾಣವಾಗಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ ರಂಗಭೂಮಿ ಕಲಾವಿದೆ ಕೆಂಪವ್ವ ಹರಿಜನ ಸೇರಿದಂತೆ ಸಾಧಕರನ್ನು ತಾಲೂಕಾಡಳಿತದ ವತಿಯಿಂದ ಸತ್ಕರಿಸಲಾಯಿತು.
ವೇದಿಕೆಯ ಮೇಲೆ ಹಿರಿಯ ನ್ಯಾಯವಾದಿ ಬಿ.ಆರ್.ಕೊಪ್ಪ, ತಾ.ಪಂ. ಅಧ್ಯಕ್ಷೆ ಸುನಂದಾ ಕರದೇಸಾಯಿ, ಉಪಾಧ್ಯಕ್ಷ ವಾಯ್.ಬಿ.ನಾಯಿಕ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮುಖಂಡರಾದ ಸೋಮಶೇಖರ ಮಗದುಮ್ಮ, ಇಓ ಬಸವರಾಜ ಹೆಗ್ಗನಾಯಕ, ಡಿವಾಯ್‍ಎಸ್‍ಪಿ ಜಾವೀದ ಇನಾಮದಾರ, ಪೌರಾಯುಕ್ತ ಶಿವಾನಂದ ಹಿರೇಮಠ, ಸಿಪಿಐ ಗೋಪಾಲ ರಾಥೋಡ, ಕೆ.ಎನ್. ವಣ್ಣೂರÀ, ಎ.ಬಿ.ಮಲಬನ್ನವರ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ, ಎಸ್. ಪಿ. ವರಾಳೆ, ಕರವೇ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ, ತಾಲ್ಲೂಕಾ ಮಟ್ಟದ ಅಧಿಕಾರಿಗಳು, ನಗರಸಭೆ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿಕ್ಷಕ ಎ.ಜಿ.ಕೋಳಿ ಸ್ವಾಗತಿಸಿ, ನಿರೂಪಿಸಿದರು. ತಹಶೀಲ್ದಾರ ಕಾರ್ಯಾಲಯ, ನಗರಸಭೆ ಕಾರ್ಯಲಯ, ಗಾಂಧಿ ಮೈದಾನದಲ್ಲಿ ಸೇರಿದಂತೆ ವಿವಿಧ ಕಡೆ ಧ್ವಜಾರೋಹಣ ನೆರವೇರಿಸಿ, ನಗರದ ಪ್ರಮುಖ ಬೀದಿಗಳಲ್ಲಿ ಶಿಕ್ಷಕ ವೃಂದ ಹಾಗೂ ಅಧಿಕಾರಿಗಳು ಪ್ರಭಾತ ಪೇರಿ ನಡೆಸಿದರು.

Related posts: