ಗೋಕಾಕ:ಭಾರತ ಪೋಲಿಯೊ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ : ದೇವಕ್ಕಾ ಪಾತ್ರೋಟ
ಭಾರತ ಪೋಲಿಯೊ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ : ದೇವಕ್ಕಾ ಪಾತ್ರೋಟ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 31 :
ಭಾರತ ಪೋಲಿಯೊ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾಜನವಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ರಾಷ್ಟ್ರಗಳ ಎದುರು ತಲೆ ಎತ್ತಿ ನಿಂತಿದೆ ಎಂದು ಅಂಗನವಾಡಿ ಕಾರ್ಯಕರ್ತೆ ದೆವಕ್ಕಾ ಪಾತ್ರೋಟ ಹೇಳಿದರು.
ರವಿವಾರದಂದು ಇಲ್ಲಿಯ ಅಂಬೇಡ್ಕರ್ ನಗರದ ಅಂಗನವಾಡಿ ಸಂಖ್ಯೆ 153ರ ಭೂತ ಸಂಖ್ಯೆ 15ರಲ್ಲಿ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರಕಾರ ಪೋಲಿಯೊದಂತಹ ಮಹಾಮಾರಿಯನ್ನು ತಡೆಯುವ ನಿಟ್ಟಿನಲ್ಲಿ ಸಾಕಷ್ಟು ಶ್ರಮ ವಹಿಸಿ ಕಾರ್ಯಪ್ರವೃತ್ತವಾಗಿದ್ದು , ದೇಶದ ಸಾರ್ವಜನಿಕರ ಸಹಕಾರದಿಂದ ಇಂದು ಭಾರತ ಪೋಲಿಯೊ ಮುಕ್ತವಾಗುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಲಕ್ಷ್ಮೀ , ಶ್ರೀಮತಿ ಅಮೀನಾ ಹಲ್ಯಾಳ, ಅಂಗನವಾಡಿ ಸಹಾಯಕಿ ಫಾತಿಮಾ ಮೋಮಿನ ಇದ್ದರು.