RNI NO. KARKAN/2006/27779|Wednesday, December 18, 2024
You are here: Home » Others » ಗೋಕಾಕ:ಕನ್ನಡಿಗರ ಮೇಲೆ ದೌರ್ಜನ್ಯ ವೆಸಗಲು ಮುಂದಾಗಿ ರುವುದು ಖಂಡನೀಯ : ಕರವೇ ಅಧ್ಯಕ್ಷ ಖಾನಪ್ಪನವರ

ಗೋಕಾಕ:ಕನ್ನಡಿಗರ ಮೇಲೆ ದೌರ್ಜನ್ಯ ವೆಸಗಲು ಮುಂದಾಗಿ ರುವುದು ಖಂಡನೀಯ : ಕರವೇ ಅಧ್ಯಕ್ಷ ಖಾನಪ್ಪನವರ 

ಕನ್ನಡಿಗರ ಮೇಲೆ ದೌರ್ಜನ್ಯ ವೆಸಗಲು ಮುಂದಾಗಿ ರುವುದು ಖಂಡನೀಯ : ಕರವೇ ಅಧ್ಯಕ್ಷ ಖಾನಪ್ಪನವರ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 24 :

 
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಉದ್ದಟತನ ಮೆರೆಯುತ್ತಿರುವ ಮಹಾ ಸರಕಾರ ಪ್ರಸ್ತುತ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಮೇಲೆ ದೌರ್ಜನ್ಯ ವೆಸಗಲು ಮುಂದಾಗಿರುವುದು ಖಂಡನೀಯ ಎಂದು ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕಾ ಪ್ರಕಟಣೆ ನೀಡಿರುವ ಅವರು ಉದ್ದವ ಠಾಕ್ರೆ ಸರಕಾರ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಪ್ರಭಾವ ತಗ್ಗಿಸಲು ಮುಂದಾಗಿ ಕನ್ನಡಿಗರ ಪ್ರಭಾವ ವಿರುವ ಪ್ರದೇಶಗಳಲ್ಲಿ ಮರಾಠಿ ಭಾಷೆಯ ಪ್ರಚಾರ ಮತ್ತು ಪ್ರಸಾರ ಮಾಡುವ ಕಾರ್ಯಮಾಡಲು ಸ್ಥಳೀಯ ಆಡಳಿತಕ್ಕೆ ಸುತ್ತೋಲೆ ಹೊರಡಿಸಿದೆ.
ಮಹಾರಾಷ್ಟ್ರ ಸರಕಾರದ ಈ ಕ್ರಮವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಕರ್ನಾಟಕ ಗಡಿ ಭಾಗಗಳಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ಶಡ ಸಂಸ್ಕೃತಿ ಇಲಾಖೆಗಳ ಮುಖೇನ ಬೆಳಗಾವಿ , ಬೀದರ, ಬಾಲ್ಕಿ ಸೇರಿದಂತೆ ಇತರ ಗಡಿ ಪ್ರದೇಶಗಳಲ್ಲಿ ಕನ್ನಡ ಭಾಷೆ ಬೆಳವಣಿಗೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ಮುಂದಾಗಬೇಕೆಂದು ಖಾನಪ್ಪನವರ ಸರಕಾರವನ್ನು ಆಗ್ರಹಿಸಿದ್ದಾರೆ.

Related posts: