RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ : ವ್ಯಾಪಾರಸ್ಥರಲ್ಲಿ ಮನವಿ ಶಾಸಕ ಬಾಲಚಂದ್ರ ಮನವಿ

ಗೋಕಾಕ:ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ : ವ್ಯಾಪಾರಸ್ಥರಲ್ಲಿ ಮನವಿ ಶಾಸಕ ಬಾಲಚಂದ್ರ ಮನವಿ 

ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ : ವ್ಯಾಪಾರಸ್ಥರಲ್ಲಿ ಮನವಿ ಶಾಸಕ ಬಾಲಚಂದ್ರ ಮನವಿ

 

ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 23 :

 

ಕೊರೋನಾ ಎರಡನೇ ಅಲೆ ದಿನೇ ದಿನೇ ಉಲ್ಭಣವಾಗುತ್ತಿದ್ದು, ಇದರ ಹತೋಟಿಗೆ ತರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ 4 ರವರೆಗೆ ಸ್ವಯಂ ಪ್ರೇರಿತರಾಗಿ ಮದ್ಯಾಹ್ನ ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವ್ಯಾಪಾರಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೊರೋನಾ ಮಹಾಮಾರಿ ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳಲ್ಲಿ ಶರವೇಗದಲ್ಲಿ ಹರಡುತ್ತಿದ್ದು ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಇದರ ನಿರ್ಮೂಲನೆಗಾಗಿ ಸಾರ್ವಜನಿಕರ ಸಹಾಯ ಅವಶ್ಯವಾಗಿದ್ದು, ಇದಕ್ಕಾಗಿಯೇ ತಹಶೀಲ್ದಾರ ಮತ್ತು ಡಿವಾಯ್‍ಎಸ್‍ಪಿ ನೇತೃತ್ವದಲ್ಲಿ ಟಾಸ್ಕ್‍ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದಿನೇ ದಿನೇ ಜನಜಂಗುಳಿ ಹೆಚ್ಚುತ್ತಿದೆ. ಮಾರುಕಟ್ಟೆಗಳಲ್ಲಿ ಜನರನ್ನು ನಿಯಂತ್ರಣಕ್ಕೆ ತರಬೇಕಿದೆ. ಸಾರ್ವಜನಿಕರಲ್ಲಿ ಈ ಬಗ್ಗೆ ಸಾಕಷ್ಟು ಅರಿವು ಮೂಡಿಸಲು ಪ್ರಯತ್ನ ಮಾಡಲಾಗುತ್ತಿದೆ. ಆದರೂ ಕೆಲವರು ಈ ಕರೋನಾ ನನಗೇನು ಬರುವುದಿಲ್ಲ ಎಂಬಂತೆ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಕೂಡ ಕಂಡುಬರುತ್ತಿದೆ. ಆದ್ದರಿಂದ ಸೋಮವಾರ ದಿ. 26 ರಿಂದ ಮೇ 4 ರವರೆಗೆ ಉಭಯ ತಾಲೂಕುಗಳಲ್ಲಿ ಬೆಳಿಗ್ಗೆ 7 ರಿಂದ ಮ. 1 ರವರೆಗೆ ಸಾರ್ವಜನಿಕರಿಗೆ ಅಗತ್ಯವಿರುವ ಅಂಗಡಿ ಮುಗ್ಗಟ್ಟುಗಳನ್ನು ತೆರೆದು ತಮ್ಮ ವ್ಯವಹಾರಗಳನ್ನು ನಡೆಸಿಕೊಳ್ಳಬೇಕು. ಮದ್ಯಾಹ್ನ 1 ಗಂಟೆಯ ನಂತರ ಕಡ್ಡಾಯವಾಗಿ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ತಾಲೂಕಾ ಆಡಳಿತದೊಂಡಿಗೆ ಸಹಕರಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಪಾಲಿಸಬೇಕು. ವ್ಯಾಪಾರಸ್ಥರು ಸಹ ಕರೋನಾ ನಿಯಂತ್ರಣಕ್ಕೆ ತಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಇದರಿಂದ ತಮ್ಮನ್ನು ತಾವೇ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಮಾಡಿಕೊಂಡಂತಾಗುತ್ತದೆ. ಕರೋನಾ ನಿರ್ಲಕ್ಷ ಮಾಡಿದರೇ ತಮ್ಮ ಜೀವಕ್ಕೆ ಅಪಾಯ ತಂದು ಒಡ್ಡಬಹುದು. ಕರೋನಾ ಚೈನ್ ಬ್ರೆಕ್ ಮಾಡುವುದೇ ನಮ್ಮ ಸರ್ಕಾರದ ಉದ್ಧೇಶವಾಗಿದೆ ಎಂದು ಅವರು ಹೇಳಿದ್ದಾರೆ. ನಿಯಂತ್ರಣಕ್ಕೆ ಸರ್ಕಾರ ಜಾರಿ ಮಾಡಿರುವ ಹೊಸ ಬಿಗಿ ಮಾರ್ಗಸೂಚಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ನಾಗರೀಕರು ಸಹಕರಿಸಬೇಕು. ಅಲ್ಲದೇ ಅನಗತ್ಯವಾಗಿ ಓಡಾಡಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪನವರ ಸಲಹೆಯಂತೆ ಮುನ್ನೆಚ್ಚರಿಕೆ ನಿಯಮಗಳನ್ನು ಪಾಲಿಸಿ ಸೋಂಕು ನಿಯಂತ್ರಣಕ್ಕೆ ನೆರವಾಗುವಂತೆ ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ.

Related posts: