RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಹೋಮ್ ಕಾರಂಟೈನ್ ನಿಂದ ಹೋರ ಬಂದು ಅಧಿಕಾರಿಗಳ ಸಭೆ ನಡೆಸಿದ ಶಾಸಕ ರಮೇಶ ಜಾರಕಿಹೊಳಿ

ಗೋಕಾಕ:ಹೋಮ್ ಕಾರಂಟೈನ್ ನಿಂದ ಹೋರ ಬಂದು ಅಧಿಕಾರಿಗಳ ಸಭೆ ನಡೆಸಿದ ಶಾಸಕ ರಮೇಶ ಜಾರಕಿಹೊಳಿ 

ಹೋಮ್ ಕಾರಂಟೈನ್ ನಿಂದ ಹೋರ ಬಂದು ಅಧಿಕಾರಿಗಳ ಸಭೆ ನಡೆಸಿದ ಶಾಸಕ ರಮೇಶ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 8 :

 
ಕೊರೋನಾ ಸರಪಳಿ (ಚೈನ್) ಮುರಿಯಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಹೋಮ್ ಕಾರಂಟೈನ್ ಹಾಗೂ ಸುದೀರ್ಘ ಕಾಲದ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾಸಕ ರಮೇಶ ಅವರು ಶನಿವಾರದಂದು ನಗರದ ತಾಲೂಕ ಪಂಚಾಯತ ಸಭಾಂಗಣದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ (ಟಾಸ್ಕ್ ಪೋರ್ಸ್ ಸಮಿತಿಯ ) ಸಭೆ ನಡೆಸಿದ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಕೊರೋನಾ ನಿಯಂತ್ರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 10 ರಿಂದ ಮೇ 24 ವರೆಗೆ ಕಠಿಣ ಜನತಾ ಕರ್ಪ್ಯೂವನ್ನು ಜಾರಿ ಮಾಡಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರು ಸರಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಸ್ಥಳೀಯ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಹೇಳಿದರು . ಈ 14 ದಿನಗಳ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರು ನಗರಕ್ಕೆ ಬರದಂತೆ , ನಗರ ಪ್ರದೇಶದ ಜನರು ಗ್ರಾಮೀಣ ಪ್ರದೇಶಕ್ಕೆ ಬರದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕೊರೋನಾ ಮಹಾಮಾರಿ ಅಂತಹ ದೊಡ್ಡ ರೋಗವೆನೆಲ್ಲಾ ಜನರು ಯಾವುದೇ ಭಯ ಪಡೆದೆ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕು ಅನಾವಶ್ಯಕವಾಗಿ ಹೊರಗಡೆ ಬರದೆ ಅವಶ್ಯಕತೆ ಅನುಗುಣವಾಗಿ ಹೊರ ಬಂದು ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಕೊರೋನಾ ಚೈನ್ ಮಟ್ಟಹಾಕಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಆಕ್ಸಿಜನ್ ಕೊರತೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಆಕ್ಸಿಜನ್ ಕೊರತೆ 15 ದಿನಗಳಲ್ಲಿ ಸರಿಹೋಗುವ ಆಶಾ ಭಾವನೆಯಿದೆ . ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಆಕ್ಸಿಜನ ಕೊರತೆಯನ್ನು ನಿಗಿಸಲು ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಂಡಿವೆ ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿಯಲಿದೆ ಎಂದು ಹೇಳಿದರು .

ಕೊರೋನಾ ಬಗ್ಗೆ ವೈದ್ಯರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸಿಕೊಂಡು ಮನೆಯಲ್ಲಿಯೇ ವ್ಯಾಯಾಮ,ಯೋಗ ,ಪ್ರಾಣಾಯಾಮಗಳನ್ನು ಮಾಡಿ ದೈಹಿಕವಾಗಿ ಸದೃಢವಾಗದರೆ ಕೊರೋನಾ ಮಹಾಮಾರಿಯನ್ನು ನಾವು ಗೆಲ್ಲಲು ಸಾಧ್ಯ. ಆ ನಿಟ್ಟಿನಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ, ಡಿ.ವಾಯ್.ಎಸ್.ಪಿ ಜಾವೇದ ಇನಾಂದಾರ, ತಾಲೂಕಾ ವೈದ್ಯಾಧಿಕಾರಿ ಡಾ. ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ , ಪೌರಾಯುಕ್ತ ಶಿವಾನಂದ ಹಿರೇಮಠ ಸೇರಿದಂತೆ ಇನ್ನೀತರ ಅಧಿಕಾರಿಗಳು ಉಪಸ್ಥಿತರಿದ್ದರು.

Related posts: