ಗೋಕಾಕ:ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಏಳು ವರ್ಷಗಳನ್ನು ಪೂರೈಸಿದ ಹಿನ್ನಲೆ ಸಸಿ ನೆಡುವ ಮೂಲಕ ಸಂಭ್ರಮಾಚರಣೆ
ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಏಳು ವರ್ಷಗಳನ್ನು ಪೂರೈಸಿದ ಹಿನ್ನಲೆ ಸಸಿ ನೆಡುವ ಮೂಲಕ ಸಂಭ್ರಮಾಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 31 :
ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಏಳು ವರ್ಷಗಳನ್ನು ಪೂರೈಸಿದ ಹಿನ್ನಲೆ ಬಿಜೆಪಿ ನಗರ ಘಟಕದ ವತಿಯಿಂದ ಸೇವಾ ಹಿ ಸಂಘಟನ ನಿಮಿತ್ಯವಾಗಿ ಇಲ್ಲಿಯ ಮಿನಿ ವಿಧಾನ ಸೌಧದ ಆವರಣದಲ್ಲಿ ಸಸಿ ನೆಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಶಾಸಕರ ಸಹಾಯಕ ಸುರೇಶ ಸನದಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಸಚೀನ ಕಮಟೇಕರ, ಅರಣ್ಯ ಇಲಾಖೆ ಅಧಿಕಾರಿ ಹನಮಂತ ಇಂಗಳಗಿ ಸೇರಿದಂತೆ ಅನೇಕರು ಇದ್ದರು.