RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸದೃಢ ಆರೋಗ್ಯವಂತರಾಗಿ : ಅಮರನಾಥ

ಗೋಕಾಕ:ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸದೃಢ ಆರೋಗ್ಯವಂತರಾಗಿ : ಅಮರನಾಥ 

ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸದೃಢ ಆರೋಗ್ಯವಂತರಾಗಿ : ಅಮರನಾಥ

 

ನಮ್ಮ ಬೆಳಗಾವಿ ಇ- ವಾರ್ತೆ, ಗೋಕಾಕ ಜು 5 :

 
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸದೃಢ ಆರೋಗ್ಯವಂತರಾಗಿ, ಸಾಧಕರಾಗುವಂತೆ ಕೆಎಮ್‍ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು.
ಅವರು, ಸೋಮವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಯುವಜನ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಪಾಲ್ಗೊಂಡ 50 ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕೀಟ್‍ಗಳನ್ನು ವಿತರಿಸಿ ಮಾತನಾಡಿದರು.
ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕ ಸದೃಢರಾಗಬೇಕು. ಸರಕಾರ ಕ್ರೀಡಾಪಟುಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುತ್ತಿದ್ದು ಕ್ರೀಡಾಪಟುಗಳು ಇದರ ಸದುಪಯೋಗ ಪಡಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರತಿಭಾನ್ವಿತರಾಗಿ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಂಡು ತಾಲೂಕಿಗೆ ಕೀರ್ತಿ ತನ್ನಿರೆಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪಾ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರಸಭೆ ಸದಸ್ಯ ಅಬ್ಬಾಸ ದೇಸಾಯಿ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಲಕ್ಕಪ್ಪ ಮಾಳಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ಯುವಜನ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಅನುಷ್ಠಾನ ಅಧಿಕಾರಿ ಎಮ್ ಪಿ ಮರನೂರ, ಸಿಬ್ಬಂಧಿ ಎಸ್ ಡಿ ನಗಾರಿ, ದೈಹಿಕ ಪರಿವೀಕ್ಷಕ ಎಲ್ ಕೆ ತೋರಣಗಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: