RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ವಿದ್ಯಾರ್ಥಿಗಳು ಕೋವಿಡ ಲಸಿಕೆ ಪಡೆದು ಕೊರೋನಾ ವೈರಸ್ ನಿಯಂತ್ರಣಕ್ಕೆ ಸಹಕರಿಸಬೇಕು: ಡಾ.ದೀಪಾ ತುಬಾಕಿ

ಗೋಕಾಕ:ವಿದ್ಯಾರ್ಥಿಗಳು ಕೋವಿಡ ಲಸಿಕೆ ಪಡೆದು ಕೊರೋನಾ ವೈರಸ್ ನಿಯಂತ್ರಣಕ್ಕೆ ಸಹಕರಿಸಬೇಕು: ಡಾ.ದೀಪಾ ತುಬಾಕಿ 

ವಿದ್ಯಾರ್ಥಿಗಳು ಕೋವಿಡ ಲಸಿಕೆ ಪಡೆದು ಕೊರೋನಾ ವೈರಸ್ ನಿಯಂತ್ರಣಕ್ಕೆ ಸಹಕರಿಸಬೇಕು: ಡಾ.ದೀಪಾ ತುಬಾಕಿ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು 5 :

 

ವಿದ್ಯಾರ್ಥಿಗಳು ಕೋವಿಡ ಲಸಿಕೆ ಪಡೆದು ಕೊರೋನಾ ವೈರಸನ ಸಂಪೂರ್ಣ ನಿಯಂತ್ರಣಕ್ಕೆ ಸಹಕರಿಸುವಂತೆ ಡಾ.ದೀಪಾ ತುಬಾಕಿ ಹೇಳಿದರು.
ಸೋಮವಾರದಂದು ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟನ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪದವಿ ಮಹಾವಿದ್ಯಾಲಯ ದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ಕ್ರಾಸ್ ಘಟಕದಿಂದ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಲಸಿಕಾ ಆಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಕೊರೋನಾ ವೈರಸ್ ನಿಂದಾಗುವ ತೀವ್ರತೆಯನ್ನು ನಾವೆಲ್ಲಾ ಅರಿತು ಲಸಿಕೆ ಪಡೆದು ವೈರಸ್ ತೀವ್ರತೆಯಿಂದ ರಕ್ಷಣೆ ಪಡೆದುಕೊಳ್ಳಬೇಕು. ಲಸಿಕೆ ಪಡೆಯುವದರಿಂದ ಯಾವುದೇ ಅಡ್ಡ ಪರಿಣಾಮವಾಗುವದಿಲ್ಲ ಭಯಪಡದೆ ವಿದ್ಯಾರ್ಥಿಗಳು ಲಸಿಕೆ ಪಡೆದು ತಮ್ಮ ಪಾಲಕರನ್ನು ಲಸಿಕೆ ಪಡೆಯುವಂತೆ ಪ್ರೇರೆಪಿಸಬೇಕು. ತಾವು ಲಸಿಕೆ ಪಡೆದು ಒಳ್ಳೆಯ ನಾಗರಿಕರಾಗಿ ಸದೃಢ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ಕರೆ ನೀಡಿದರು.
ಲಸಿಕಾ ಅಭಿಯಾನವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸಿದರು. ಪ್ರಾಚಾರ್ಯ ಐ.ಎಸ್.ಪವಾರ, ಉಪನ್ಯಾಸಕಿ ಎಂ.ವಾಯ್. ಪಾಟೀಲ ಸೇರಿದಂತೆ ಅನೇಕರು ಇದ್ದರು.

Related posts: