RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮನವಿ

ಗೋಕಾಕ:ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮನವಿ 

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮನವಿ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 9 :

ಅಮಾಯಕ ಹೆಣ್ಣು ಮಕ್ಕಳ ಮೇಲೆ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು  ಖಂಡಿಸಿ ಇಲ್ಲಿನ ಇಂಡಿಯನ್ ಸೋಶಿಯಲ್ ವೆಲಫೇರ ಅಸೋಸಿಯೇಷನ್ ಸಂಘಟನೆಯ ಸದಸ್ಯರು  ಪ್ರತಿಭಟನೆ ನಡೆಸಿದರು.
ಗುರುವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಸಂಘಟನೆಯ ಕಾರ್ಯಕರ್ತರು ಅತ್ಯಾಚಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು, ನಂತರ ತಹಶೀಲ್ದಾರ ಕಛೇರಿಗೆ ತೆರಳಿ ತಹಶೀಲ್ದಾರ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು.
ಇತ್ತೀಚಿನ ದಿನಗಳಲ್ಲಿ  ದೇಶದಲ್ಲಿ ಅಮಾಯಕ  ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸುವಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದ್ದು ಖಂಡನೀಯವಾಗಿದೆ. ಕಳೆದ ಕೆಲದಿನಗಳ ಹಿಂದೆ ಮೈಸೂರಿನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಂಧನಕ್ಕೊಳಗಾಗಿರುವ ಆರೋಪಿಗಳಿಗೆ  ಮತ್ತು  ದೆಹಲಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೊತೆ ಕೆಲಸ ಮಾಡುತ್ತಿದ್ದ 21 ವರ್ಷ ಪ್ರಾಯದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿಯ ಹತ್ಯೆ ಘಟನೆ ಅತ್ಯಂತ ಭಯಾನಕ ಮತ್ತು ಆಘಾತಕಾರಿಯಾದ್ದು, ಈ  ಎರೆಡೂ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ  ಗರಿಷ್ಠ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಕಾರರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಫಯಾಜ ಅವಟಿ, ಮಹ್ಮದಗೌಸ ಜಮಾದರ, ಮಹೆಬೂಬ ತಲವಾರ, ಅಬೆದುಲ್ಲಾ ಅವಟಿ, ಯೂಸುಫ್ ಖುರೇಶ ,ಅರಬಾಝ ದಫೇದಾರ, ಶೋಯಿಬ್ ಅರಭಾವಿ, ಆಸೀಫ್ ಮುಲ್ಲಾ, ಮುಜಾಹಿದ ಮುಲ್ಲಾ, ವಾಸೀಮ ಡಾಂಗೆ,ನದೀಮ ಸೈಯದ ಸೇರಿದಂತೆ ಇತರರು ಇದ್ದರು.

Related posts: