RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ಓಮಿಕ್ರಾನ್ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿ : ತಹಶೀಲ್ದಾರ ಪ್ರಕಾಶ

ಗೋಕಾಕ:ಓಮಿಕ್ರಾನ್ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿ : ತಹಶೀಲ್ದಾರ ಪ್ರಕಾಶ 

ಓಮಿಕ್ರಾನ್ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿ : ತಹಶೀಲ್ದಾರ ಪ್ರಕಾಶ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 7 :

 
ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರ ವೈರಾಣು ಪ್ರಕರಣಗಳು ಹೆಚ್ಚುತ್ತಿದ್ದು, ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಸರಕಾರ ಜಾರಿಗೊಳಿಸಿದ್ದು, ಸಾರ್ವಜನಿಕರು ಸಹಕರಿಸುವಂತೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಕೋರಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರದ ಆದೇಶದಂತೆ ಶಾಲಾ-ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಮಕ್ಕಳ ಪೋಷಕರು 2 ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳತಕ್ಕದ್ದು. ಮಾಸ್ಕ್ ಧರಿಸುವಿಕೆಯು ಅತ್ಯಾವಶ್ಯಕವಾದ ಸೋಂಕು ನಿಯಂತ್ರಣ ಕ್ರಮವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ತಪ್ಪದೇ ಮಾಸ್ಕ್ ಧರಿಸತಕ್ಕದ್ದು. ತಪ್ಪಿದ್ದಲ್ಲಿ ರೂ. 100 ಗಳ ದಂಡ ವಿಧಿಸಲಾಗುವುದು. ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಸುವ ಸಾಂಸ್ಕೃತಿಕ ಚಟುವಟಿಕೆಗಳು/ಹಬ್ಬಗಳು ಮತ್ತು ಸಮಾರಂಭಗಳನ್ನು ದಿನಾಂಕ 15.01.2022 ರವರೆಗೆ ಮುಂದೂಡತಕ್ಕದ್ದು ಎಲ್ಲ ಸಭೆ, ಸಮಾರಂಭ, ಸಮ್ಮೇಳನ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 500 ಜನರಿಗೆ ಸೀಮಿತಗೊಳಿಸಲಾಗಿದೆ ಮತ್ತು ಇಂತಹ ಸಂದರ್ಭಗಳಲ್ಲಿ ಕೋವಿಡ್-19 ಸಮುಚ್ಛಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಂದರೆ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಇತ್ಯಾದಿ. ಇವುಗಳನ್ನು ಜಾರಿಗೊಳಿಸುವುದು ಸಂಘಟಕಾರರ/ವ್ಯವಸ್ಥಾಪಕರ ಜವಾಬ್ದಾರಿಯಾಗಿರುತ್ತದೆ. 65 ವರ್ಷ ವಯಸ್ಸು ಮೀರಿದ ಹಿರಿಯ ನಾಗರಿಕರು, ಸಹವರ್ತಿ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳು ಕಡ್ಡಾಯವಾಗಿ ಕೋವಿಡ್-19 ತಪಾಸಣೆ ಮಾಡಿಕೊಳ್ಳುವುದು.
ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯ ವಿರುದ್ಧ ಕಾನೂನು ಕ್ರಮಕ್ಕೆ ಅವಕಾಶವಿದ್ದು, ಆದ್ದರಿಂದ ಸಾರ್ವಜನಿಕರು ಈ ನಿಟ್ಟಿನಲ್ಲಿ ಸೂಕ್ತ ಮುಂಜಾಗ್ರತೆ ವಹಿಸಲು ಮತ್ತು ಸಹಕರಿಸಲು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಕೋರಿದ್ದಾರೆ.

Related posts: