RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ಪರಿಷತ್ ಚುನಾವಣೆ : ತಾಲೂಕಿನಲ್ಲಿ ಶಾಂತಿಯುತ ಮತದಾನ

ಗೋಕಾಕ:ಪರಿಷತ್ ಚುನಾವಣೆ : ತಾಲೂಕಿನಲ್ಲಿ ಶಾಂತಿಯುತ ಮತದಾನ 

ಪರಿಷತ್ ಚುನಾವಣೆ : ತಾಲೂಕಿನಲ್ಲಿ ಶಾಂತಿಯುತ ಮತದಾನ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 10 :
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಗೆ ಶುಕ್ರವಾರ ಮತದಾನ ನಡೆದಿದ್ದು , ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆ ಜರುಗದೆ ಶಾಂತಿಯುತವಾಗಿ ಮತದಾನವಾಗಿದ್ದು, ಶೇಕಡಾ 100 ರಷ್ಟು ಮತದಾನವಾಗಿದೆ ಎಂದು ವರದಿಯಾಗಿದೆ.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಭಾಗವಹಿಸಿದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನಗರಸಭೆಯ ಮತಗಟ್ಟೆ 261 ರಲ್ಲಿ ಮತದಾನ ಮಾಡಿದರು. ಗೋಕಾಕ ಮತ್ತು ಅರಭಾವಿಯಲ್ಲಿ ಸ್ಥಾಪಿಸಲಾದ ಎಲ್ಲಾ ಮತಗಟ್ಟೆಗಳಲ್ಲಿ ಮುಂಜಾನೆಯಿಂದಲೆ ಪಂಚಾಯಿತಿ ಸದಸ್ಯರು ಒಬ್ಬಬರಾಗಿ ಆಗಮಿಸಿದ ತಮ್ಮ ಮತವನ್ನು ಚಲಾಯಿಸಿದರೆ ಕೆಲ ಗ್ರಾಮಗಳಲ್ಲಿ ಪಂಚಾಯಿತಿ ಸದಸ್ಯರೆಲ್ಲರು ಒಂದು ಕಡೆ ಸೇರಿ ಒಟ್ಟಾಗಿ ಬಂದು ಮತದಾನ ಮಾಡಿದರು.

ಈ ಬಾರಿ ನಡೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಗೋಕಾಕ ತಾಲ್ಲೂಕಿನ ಗುಜನಾಳ ಗ್ರಾಮದಲ್ಲಿ ಬೂತ ಮುಂದೆ ಕುಳಿತು ಕಾರ್ಯನಿರ್ವಹಿಸಿದರೆ, ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಕೊಣ್ಣೂರ ಪುರಸಭೆಯಲ್ಲಿ ಹಾಗೂ ಮಗಳು ಪ್ರಿಯಾಂಕಾ ಜಾರಕಿಹೊಳಿ ಅವರು ಶಿಂಧಿಕುರಬೇಟ ಗ್ರಾಮದಲ್ಲಿ ಬೂತ ಏಜೆಂಟರಾಗಿ ಕಾರ್ಯನಿರ್ವಹಿಸಿ ಎಲ್ಲರ ಗಮನ ಸೆಳೆದರು. ಉಳಿದ ಎಲ್ಲಾ ಕಾರ್ಯಕರ್ತರು ಗೋಕಾಕ ಹಾಗೂ ಅರಭಾವಿ ಕ್ಷೇತ್ರದಲ್ಲಿ ಬೂತ ಮಟ್ಟದ ಏಜೆಂಟರಾಗಿ ಕಾರ್ಯನಿರ್ವಹಿಸಿದರು. ಈಗಷ್ಟೇ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವ ಅಶೋಕ ಪೂಜಾರಿ ಅವರು ಮಮದಾಪೂರ ಗ್ರಾಮದಲ್ಲಿ ಬೂತ ಏಜೆಂಟರಾಗಿ ಕಾರ್ಯನಿರ್ವಹಿಸಿದರು.

ತಾಲ್ಲೂಕಿನಲ್ಲಿ ಗಂಡು 323 ಹೆಣ್ಣು 361 ಒಟ್ಟು 684 ಮತದಾರರಲ್ಲಿ 684 ಮತದಾರರು ಸಹ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಮತ ಚಲಾಯಿಸಲು ಒಟ್ಟು 35 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.

Related posts: