ಚಿಕ್ಕೋಡಿ :ಬಿಜೆಪಿ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕಿದ : ಲಖನ ಜಾರಕಿಹೊಳಿ , ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು
ಬಿಜೆಪಿ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕಿದ : ಲಖನ ಜಾರಕಿಹೊಳಿ , ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು
ನಮ್ಮ ಬೆಳಗಾವಿ ಇ – ವಾರ್ತೆ , ಚಿಕ್ಕೋಡಿ ಡಿ 14 :
ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಜಯಗಳಿಸಿದ್ದಾರೆ.
ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಚನ್ನರಾಜ ಹಟ್ಟಿಹೋಳಿ ತಮ್ಮ ಮೊದಲ ಪ್ರಯತ್ನದಲ್ಲೇ ಅದ್ಭುತ ಜಯದೊಂದಿಗೆ ವಿಧಾನಪರಿಷತ್ ಪರಿಷತ್ ಮೆಟ್ಟಿಲು ಹತ್ತಿದ್ದಾರೆ. ಎರಡನೇ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅಚ್ಚರಿಯ ಜಯಸಾಧಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದು, ಮೂರನೇ ಸ್ಥಾನಕ್ಕಿಳಿದ ಬಿಜೆಪಿ ಭಾರೀ ಮುಖಬಂಗ ಅನುಭವಿಸಿದೆ. ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಬೇಕು ಎಂಬ ಮಹಾಂತೇಶ ಕವಟಗಿಮಠ ಅವರ ಆಸೆ ನುಚ್ಚುನೂರಾಗಿದೆ.