RNI NO. KARKAN/2006/27779|Friday, November 8, 2024
You are here: Home » breaking news » ಗೋಕಾಕ:ಕರೋನಾ ತಡೆಗಟ್ಟಲು ಯಾವುದೇ ರೀತಿ ಭಯಪಡದೆ ಮಕ್ಕಳಿಗೆ ಲಸಿಕೆ ಹಾಕಿಸಿ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಮನವಿ

ಗೋಕಾಕ:ಕರೋನಾ ತಡೆಗಟ್ಟಲು ಯಾವುದೇ ರೀತಿ ಭಯಪಡದೆ ಮಕ್ಕಳಿಗೆ ಲಸಿಕೆ ಹಾಕಿಸಿ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಮನವಿ 

ಕರೋನಾ ತಡೆಗಟ್ಟಲು ಯಾವುದೇ ರೀತಿ ಭಯಪಡದೆ ಮಕ್ಕಳಿಗೆ ಲಸಿಕೆ ಹಾಕಿಸಿ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಮನವಿ

 

ನಮ್ಮ ಬೆಳೆಗಾವಿ ಇ – ವಾರ್ತೆ, ಗೋಕಾಕ ಜ 3 :

 
ಕರೋನಾ ತಡೆಗಟ್ಟಲು ಯಾವುದೇ ರೀತಿ ಭಯಪಡದೆ ಮಕ್ಕಳಿಗೆ ಲಸಿಕೆ ಹಾಕಿಸಿ ಎಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಮನವಿ ಮಾಡಿದರು.

ಸೋಮವಾರದಂದು ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಆರೋಗ್ಯ ಇಲಾಖೆ ಹಮ್ಮಿಕೊಂಡ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಪರಿಶೀಲಿಸಿ ಅವರು ಮಾತನಾಡಿದರು
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವುದು ಎಲ್ಲರ ಕರ್ತವ್ಯವಾಗಿದೆ.  ನಿಮ್ಮನ್ನು ರಕ್ಷಿಸಿಕೊಳ್ಳಲು ಇರುವ ಏಕೈಕ ಮಾರ್ಗವೆಂದರೆ ಮಾಸ್ಕ್ , ಸಮಾಜಿಕ ಅಂತರ , ಸ್ಯಾನಿಟೈಜರ ಸೇರಿದಂತೆ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುವದು ಹಿಂದೆಂದಿಗಿಂತಲೂ ಈಗ ಹೆಚ್ಚು ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೊರೋನಾ ಮುನ್ನೇಚರಿಕಾ ನಿಯಮಗಳನ್ನು ಪಾಲಿಸಿ ಸರಕಾರಕ್ಕೆ ಸಹಕಾರ ನೀಡಿ ಕೊರೋನಾ ಮುಕ್ತ ಭಾರತ ನಿರ್ಮಿಸುವಲ್ಲಿ ಸಹಕರಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಚಾರ್ಯ ಗೋಪಾಲ ಮಾಳಗಿ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts: