ಘಟಪ್ರಭಾ:ಘಟಪ್ರಭಾಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು : ಶಾಸಕ ರಮೇಶ ಜಾರಕಿಹೊಳಿಗೆ ಸನ್ಮಾನ
ಘಟಪ್ರಭಾಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು : ಶಾಸಕ ರಮೇಶ ಜಾರಕಿಹೊಳಿಗೆ ಸನ್ಮಾನ
ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಫೆ 10 :
ಪಟ್ಟಣಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಅವಿರತ ಶ್ರಮವಹಿಸಿದ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಜಿ.ಎಸ್.ರಜಪೂತ ಗುರುವಾರ ಸನ್ಮಾನಿಸಿದರು.
ಘಟಪ್ರಭಾ ಪಟ್ಟಣಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಅವರು ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿದ್ದರು. ಈಗ ನಗರಕ್ಕೆ ಶಾಸಕರು ಕಾಲೇಜು ಮಂಜೂರು ಮಾಡಿದ ಪ್ರಯುಕ್ತ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ.