ಗೋಕಾಕ:ಸಹಕಾರಿ ಸಂಘಗಳು ಸೇವಾ ಭಾವನೆಯಿಂದ ಕಾರ್ಯನಿರ್ವಹಿಸಿ ರೈತರ ಅಭಿವೃದ್ಧಿಗೆ ಶ್ರಮಿಸಿ : ಡಾ.ರಾಜೇಂದ್ರ ಸಣ್ಣಕ್ಕಿ
ಸಹಕಾರಿ ಸಂಘಗಳು ಸೇವಾ ಭಾವನೆಯಿಂದ ಕಾರ್ಯನಿರ್ವಹಿಸಿ ರೈತರ ಅಭಿವೃದ್ಧಿಗೆ ಶ್ರಮಿಸಿ : ಡಾ.ರಾಜೇಂದ್ರ ಸಣ್ಣಕ್ಕಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 29 :
ಸಹಕಾರಿ ಸಂಘಗಳು ಸೇವಾ ಭಾವನೆಯಿಂದ ಕಾರ್ಯನಿರ್ವಹಿಸಿ ರೈತರ ಅಭಿವೃದ್ಧಿಗೆ ಶ್ರಮಿಸುವಂತೆ ಮಾಜಿ ಜಿಪಂ ಸದಸ್ಯ ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಮಂಗಳವಾರದಂದು ನಗರದ ಹೊರ ವಲಯದ ಗೋಕಾಕ ಸಪ್ಲಾರ್ಯಸ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಳಗಾವಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳ್ಳಿ ಮಾರಾಟ ಸಹಕಾರಿ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ರೈತರಿಗೆ ಆರ್ಥಿಕವಾಗಿ ಸಹಾಯ ಮಾಡಿ ಅವರ ಆರ್ಥಿಕ ಪ್ರಗತಿಗಾಗಿ ಸಹಕಾರಿ ಸಂಘಗಳನ್ನು ಪ್ರಾರಂಭಿಸಲಾಗಿದೆ. ಸರಕಾರಿ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ಈ ಸಂಘಗಳದ್ದಾಗಿದೆ. ರೈತರಿಗೆ ಬೇಕಾಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒಂದೇ ಸೂರಿನಡಿ ಕಲ್ಪಿಸಬೇಕು. ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ಹೆಚ್ಚಿನ ವಿಚಾರಗಳನ್ನು ತಿಳಿದು ಸಹಕಾರಿ ಸಂಘಗಳನ್ನು ಉಳಿಸಿ ಬೆಳೆಸುವಂತೆ ಕರೆ ನೀಡಿದರು.
ಕಾರ್ಯಕ್ರಮವನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಬಾಳಾಸಾಹೇಬ ಮಾಂಗಳೇಕರ ಅವರನ್ನು ಸತ್ಕರಿಸಲಾಯಿತು.
ವೇದಿಕೆ ಮೇಲೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಬಸನಗೌಡ ಪಾಟೀಲ, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ್ ಡವಳೇಶ್ವರ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಉಪಾಧ್ಯಕ್ಷ ಬಿ.ಎನ್.ಉಳ್ಳಾಗಡ್ಡಿ, ನಿರ್ದೇಶಕ ಬಸವರಾಜ ಸುಲ್ತಾಪೂರಿ, ಟಿಎಪಿಸಿಎಂಎಸ್ ನ ಅಧ್ಯಕ್ಷ ಅಶೋಕ್ ನಾಯಿಕ, ಉಪಾಧ್ಯಕ್ಷ ವಿಠಲ ಪಾಟೀಲ, ನಿರ್ದೇಶಕ ಜಿ.ಎಲ್.ಕಂಕಣವಾಡಿ, ಮಾಜಿ ಜಿಪಂ ಸದಸ್ಯರಾದ ಟಿ.ಆರ್.ಕಾಗಲ್.ಮಡೆಪ್ಪ ತೋಳಿನವರ, ಲಿಂಗಪ್ಪ ಕುರಬೇಟ, ಬಿಡಿಸಿಸಿ ಬ್ಯಾಂಕನ ತಾಲೂಕು ನಿಯಂತ್ರಣ ಅಧಿಕಾರಿ ಮಹಾಂತೇಶ ಕುರಬೇಟ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶಾಹಿನ ಅಕ್ತರ್ , ಮಹಾಮಂಡಳದ ಸಮನ್ವಯ ಅಧಿಕಾರಿ ಎಚ್.ಡಿ ಮಂಜುನಾಥ, ಉಪನ್ಯಾಸಕರುಗಳಾದ ಎಸ್.ಬಿ ಗದಾಡೆ, ಡಾ.ಜಿ.ಆರ್.ನಿಡೋಣಿ, ಶಂಕರ ಕರಬಸಣ್ಣವರ, ಯೂನಿಯನ್ ನ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಎನ್ .ಯಡಳ್ಳಿ ಇದ್ದರು.
ಹಾಲಪ್ಪ ಜಗ್ಗಿನವರ ಸ್ವಾಗತಿಸಿದರು, ಗಂಗಾಧರ ಹಾರುಗೋಪ್ಪ ವಂದಿಸಿದರು