ಬೆಳಗಾವಿ:ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ ನನ್ನ ಸಿಡಿ ತಯಾರಿಸಿದ್ದ ಮಹಾನಾಯಕನ ಕೈವಾಡ : ಮಾಜಿ ಸಚಿವ ರಮೇಶ ಆರೋಪ
ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ ನನ್ನ ಸಿಡಿ ತಯಾರಿಸಿದ್ದ ಮಹಾನಾಯಕನ ಕೈವಾಡ : ಮಾಜಿ ಸಚಿವ ರಮೇಶ ಆರೋಪ
ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಏ 14 :
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ ನನ್ನ ಸಿಡಿ ತಯಾರಿಸಿದ್ದ ಮಹಾನಾಯಕನ ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ಸಂತೋಷ್ ಪಾಟೀಲ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಇದನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ. ನಮ್ಮ ನಾಯಕರು ಅನುಮತಿ ನೀಡಿದರೆ ಸೋಮವಾರ ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬಾರದು. ನನ್ನ ಹಾಗು ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ರಮೇಶ್ ಜಾರಕಿಹೊಳಿ ಆಗ್ರಹಿಸಿದರು. ಇದಕ್ಕೂ ಮೊದಲು ಬಡಸ್ ಗ್ರಾಮದಲ್ಲಿ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಹೂವಿನ ಹಾರ ಅರ್ಪಿಸಿದರು.