RNI NO. KARKAN/2006/27779|Monday, December 23, 2024
You are here: Home » ಬೆಳಗಾವಿ ಗ್ರಾಮೀಣ » ಗೋಕಾಕ:ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಸಮರ್ಪಣಾ ಭಾವ ಅತಿ ಮಹತ್ವದ ಪಾತ್ರ ವಹಿಸುತ್ತಿದೆ : ವೆಂಕಟೇಶ ಶಿಂಧಿಹಟ್ಟಿ

ಗೋಕಾಕ:ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಸಮರ್ಪಣಾ ಭಾವ ಅತಿ ಮಹತ್ವದ ಪಾತ್ರ ವಹಿಸುತ್ತಿದೆ : ವೆಂಕಟೇಶ ಶಿಂಧಿಹಟ್ಟಿ 

ದೇಶದ ಅಭಿವೃದ್ಧಿಯಲ್ಲಿ  ಕಾರ್ಮಿಕರ ಸಮರ್ಪಣಾ ಭಾವ ಅತಿ ಮಹತ್ವದ ಪಾತ್ರ ವಹಿಸುತ್ತಿದೆ : ವೆಂಕಟೇಶ ಶಿಂಧಿಹಟ್ಟಿ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 1 :

ದೇಶದ ಅಭಿವೃದ್ಧಿಯಲ್ಲಿ ಶ್ರಮಜೀವಿಗಳಾದ ಕಾರ್ಮಿಕರ ಸಮರ್ಪಣಾ ಭಾವ ಅತಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಕಾರ್ಮಿಕ ಇಲಾಖೆ ಪ್ರಾದೇಶಿಕ ಉಪಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಹೇಳಿದರು.
ರವಿವಾರದಂದು  ನಗರದ ಶಾಸಕರ ಕಚೇರಿಯಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ನೌಕರರ ಸಂಘ ಗೋಕಾಕ ಶಾಖೆ ಮತ್ತು ಗೋಕಾಕ ತಾಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಆರೋಗ್ಯರ,ವಸತಿ, ವೇತನ , ವಿಮೆ, ಮಕ್ಕಳ ಶಿಕ್ಷಣ ಸೇರಿದಂತೆ ಹಾಗೂ ಮದುವೆ ಮುಂತಾದ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದ್ದು, ಇವುಗಳ ಸದುಪಯೋಗದಿಂದ ಕಾರ್ಮಿಕರು ನೆಮ್ಮದಿಯ ಜೀವನ ನಡೆಸುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ನಗರವನ್ನು ಸೌಂದರ್ಯವಾಗಿಡಲು ಶ್ರಮಿಸುತ್ತಿರುವ ನಗರಸಭೆಯ ಪೌರಕಾರ್ಮಿಕರನ್ನು, ವಿವಿಧ ಇಲಾಖೆಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಹಾಗೂ ಪತ್ರಕರ್ತರನ್ನು ಸತ್ಕರಿಸಲಾಯಿತು.

ವೇದಿಕೆಯ ಮೇಲೆ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಶಾಸಕರ ಸಹಾಯಕರಾದ ಕಾಂತು ಎತ್ತಿನಮನಿ, ಸುರೇಶ ಸನದಿ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ, ಟಿಎಚ್‍ಓ ಮುತ್ತಣ್ಣ ಕೊಪ್ಪದ, ಕಾರ್ಮಿಕ ನಿರೀಕ್ಷಕ ಪಾಂಡುರಂಗ ಮಾವರಕರ, ತಾಲೂಕಾಧಿಕಾರಿಗಳಾದ ಡಾ. ಮೋಹನ ಕಮತ, ಎಮ್ ಎಮ್ ನದಾಫ್, ಜಯಶ್ರೀ ಶಿಲವಂತ, ನೌಕರರ ಸಂಘದ ಅಧ್ಯಕ್ಷ ಬಸವರಾಜ ಮುರಘೋಡ, ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಮೇಗೇರಿ, ಗೌರವಾಧ್ಯಕ್ಷ ಭೀಮಶಿ ಭರಮನ್ನವರ, ಕರವೇ ಗಜಸೇನೆ ಅಧ್ಯಕ್ಷ ಪವನ ಮಹಾಲಿಂಗಪೂರ ಸೇರಿದಂತೆ ಅನೇಕರು ಇದ್ದರು.

Related posts: