ಮೂಡಲಗಿ:ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಮತ್ತೇ ಅಗ್ರ ಸ್ಥಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಮತ್ತೇ ಅಗ್ರ ಸ್ಥಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ
ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಮೇ 19 :
ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯ ಈ ಬಾರಿಯೂ ಪ್ರಥಮ ರ್ಯಾಂಕ್ ಗಳಿಸಿದ್ದು, ಶೇ 93.70 ರಷ್ಟು ಫಲಿತಾಂಶ ಬಂದಿದೆ. ಮೂಡಲಗಿ ವಲಯ ಪ್ರಥಮ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ ಬಳಗಕ್ಕೆ ಅಭಿನಂದನೆ ಸಲ್ಲಿಸಿರುವ ಅವರು, ಉತ್ತಮ ಫಲಿತಾಂಶಕ್ಕೆ ಶ್ರಮಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮತ್ತು ಶಿಕ್ಷಕ ಬಳಗ, ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಸದಾ ಪ್ರೋತ್ಸಾಹಿಸುತ್ತಿರುವ ಪಾಲಕ-ಪೋಷಕರಿಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.