RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಮಹೇಶ್ ಕೋಣಿ ನೇಮಕ

ಗೋಕಾಕ:ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಮಹೇಶ್ ಕೋಣಿ ನೇಮಕ 

ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಮಹೇಶ್ ಕೋಣಿ ನೇಮಕ

 

ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಜೂ 8 :

ಪ್ರಸ್ತುತ ಗೋಕಾಕ  ನಗರದ ಸರಕಾರಿ ಆಸ್ಪತ್ರೆ ಹಿರಿಯ ವೈದ್ಯ ಹೃದಯ ರೋಗ ತಜ್ಞ  ಡಾ. ಮಹೇಶ್ ಕೋಣಿ ಅವರನ್ನು ಬೆಳಗಾವಿ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ (ಡಿಎಚ್ಓ) ನೇಮಕ ಮಾಡಲಾಗಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿಕಾಂತ ಮುನ್ಯಾಳ ಅವರ ಜಾಗಕ್ಕೆ ಈ ವರ್ಗಾವಣೆ ಮಾಡಲಾಗಿದ್ದು, ಜೂ 10 ರಂದು ಡಾ. ಮಹೇಶ್ ಕೋಣಿ ಅವರು  ಅಧಿಕಾರ ಸ್ವೀಕರಿಸಲಿದ್ದಾರೆ

Related posts: