RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ಎಲ್ಲರಿಗೂ ಸಮಾನವಾಗಿ ಕಾಣುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡಬೇಕು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ

ಗೋಕಾಕ:ಎಲ್ಲರಿಗೂ ಸಮಾನವಾಗಿ ಕಾಣುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡಬೇಕು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ 

ಎಲ್ಲರಿಗೂ ಸಮಾನವಾಗಿ ಕಾಣುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡಬೇಕು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 30 :

 

ಎಲ್ಲರಿಗೂ ಸಮಾನವಾಗಿ ಕಾಣುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಶನಿವಾರದಂದು ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರವಿಣ ನೆಟ್ಟಾರು ಮನೆಗೆ ಸಾತ್ವಾನ ಹೇಳಲು ಹೋಗಿದ್ದ ಸಿ.ಎಂ ಅವರು ಪಾಜಿಲ್ ಅವರ ಮನೆಗೆ ಹೋಗದೆ ಹಾಗೆ ಮರಳಿದ್ದಾರೆ. ಬಿಜೆಪಿ ಕಾರ್ಯಕರ್ತರೆಂದು ಹೇಳಿ ಸರಕಾರ 25 ಲಕ್ಷ ಪರಿಹಾರ ನೀಡಿದೆ. ಎಲ್ಲರನ್ನು ಒಂದೇ ಎಂದು ಪರಿಗಣಿಸದೆ ಬಿಜೆಪಿ ಸರಕಾರ ತಾರತಮ್ಯ ತೋರುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದ ಅವರು ದೊಡ್ಡ ಜಿಲ್ಲೆ ಬೆಳಗಾವಿಯಿಂದ ಸಿದ್ದರಾಮಯ್ಯ ಅವರ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಾರೆ. ಈಗಾಗಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ‌ ರಾಜ್ಯದ ಗೃಹ ಸಚಿವರು ಇದರ ಬಗ್ಗೆ ಗಮನ ಹರಿಸಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವ ಕಾರ್ಯ ಮಾಡಬೇಕು. ಇದನ್ನು ಚುನಾವಣೆಯಲ್ಲಿ ತಮ್ಮ ವ್ಯಕ್ತಿತ್ವವನ್ನು ಬೆಳೆಸುಕೊಳ್ಳುವಲ್ಲಿ ಮಗ್ನರಾಗಿದ್ದಾರೆ ಇದನ್ನು ಬಿಟ್ಟು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮುಂದಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸರಕಾರವನ್ನು ಆಗ್ರಹಿಸಿದ್ದಾರೆ.

Related posts: