ಗೋಕಾಕ:ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಶ್ರೀ ಪ್ರಸನ್ನಾನಂದ ವಾಲ್ಮೀಕಿ ಸ್ವಾಮಿಗಳಿಗೆ ಸನತ ಜಾರಕಿಹೊಳಿ ಬೆಂಬಲ
ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಶ್ರೀ ಪ್ರಸನ್ನಾನಂದ ವಾಲ್ಮೀಕಿ ಸ್ವಾಮಿಗಳಿಗೆ ಸನತ ಜಾರಕಿಹೊಳಿ ಬೆಂಬಲ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 12 :
ಶ್ರೀ ಪ್ರಸನ್ನ ನಂದ ವಾಲ್ಮೀಕಿ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಯುವ ನಾಯಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಸ್ವಾತಂತ್ರ ಉದ್ಯಾನವನ ಆವರಣದಲ್ಲಿ ಸತತ 215ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸೋಮವಾರದಂದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಾಲ್ಮೀಕಿ ಶ್ರೀಗಳಿಗೆ ಬೆಂಬಲ ಸೂಚಿಸಿದರು.
ಈ ವೇಳೆ ಮಾತನಾಡಿದ ಅವರು ಸರ್ಕಾರ ಕೂಡಲೇ ನಾಗಮೋಹನದಾಸ್ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಸಂವಿಧಾನ, ರಾಮಾಯಣ ಬರೆದ ವಂಶ ನಮ್ಮದು. ನಾವಿಂದು ರಸ್ತೆಗಿಳಿದು ಹೋರಾಟ ಮಾಡುವ ಅನಿವಾರ್ಯ ಎದುರಾಗಿದೆ. ಶ್ರೀಗಳ ಧರಣಿ ಸತ್ಯಾಗ್ರಹ ಇಂದಿಗೆ 215ನೇ ದಿನಕ್ಕೆ ತಲುಪಿದೆ. ಸರ್ಕಾರದ ಮಂತ್ರಿಗಳಾಗಲಿ, ಮುಖ್ಯಮಂತ್ರಿಗಳಾಗಲಿ, ಸ್ಥಳಕ್ಕಾಗಮಿಸಿ ವರದಿ ಜಾರಿಗೊಳಿಸುವ ಭರವಸೆ ನೀಡಿಲ್ಲ. ಇದು ಖೇದಕರ ಸಂಗತಿಯಾಗಿದ್ದು, ಸರಕಾರ ಎಚ್ಚೆತ್ತುಕೊಂಡು ನಾಯಕ ಜನಾಂಗಕ್ಕೆ 7.5 ಮಿಸಲಾತಿ ಕೂಡಲೇ ಜಾರಿ ಮಾಡಬೇಕು ಎಂದು ಇದೇ ವೇಳೆ ಅವರು ಸರಕಾರವನ್ನು ಒತ್ತಾಯಿಸಿದ ಅವರು ಶ್ರೀಗಳು ನಡೆಸುತ್ತಿರುವ ಹೋರಾಟಕ್ಕೆ ಜಾರಕಿಹೊಳಿ ಕುಟುಂಬ ಸದಾ ಬೆನ್ನನೆಲುಬಾಗಿ ಇರುತ್ತದೆ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ಮೀಸಲಾತಿ ಸಂಬಂಧಿಸಿದಂತೆ ಜಾಗೃತಿ ಮೂಡಿಸಿ, ಸಮುದಾಯದ ಸಂಘಟನೆಬಲಿಷ್ಠ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.