RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ

ಗೋಕಾಕ:ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ 

ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 25 :
ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ರಾಜ್ಯ ಮತ್ತು ರಾಷ್ಟ್ರದ ಸಮಗ್ರ ಪ್ರಗತಿಗೆ ಶ್ರಮಿಸುತ್ತಿವೆ ಎಂದು ಹೇಳಿದರು.
ಪಂ. ದೀನದಯಾಳ ಉಪಾಧ್ಯೆ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕೆನ್ನುವ ಅವರ ಆಶಯವಾಗಿತ್ತು. ಈ ದಿಶೆಯಲ್ಲಿ ಸರ್ಕಾರಗಳು ಶ್ರಮಿಸುತ್ತಿದ್ದು, ಕೇಂದ್ರ ಹಾಗೂ ರಾಜ್ಯದಲ್ಲಿ ಪಂ. ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಲು ಶ್ರಮವಹಿಸುತ್ತಿದ್ದಾರೆ. ಬಿಜೆಪಿ ವಿಶ್ವದಲ್ಲಿಯೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದಕ್ಕೆ ಪಂ. ದೀನದಯಾಳ ಉಪಾಧ್ಯೆ ಮತ್ತು ಶ್ಯಾಮ ಪ್ರಸಾದ ಮುಖರ್ಜಿ ಅವರ ತ್ಯಾಗ, ಬಲಿದಾನವೇ ಕಾರಣವೆಂದು ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ ನಡೆಯುತ್ತಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಪಂ. ದೀನದಯಾಳ ಉಪಾಧ್ಯೆ ಅವರ ಜನ್ಮದಿನ ಹಾಗೂ ಕಮಲೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ನಂತರ ಕಾರ್ಯಕರ್ತರಿಗೆ ಸಹಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಅಧ್ಯಕ್ಷತೆಯನ್ನು ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್, ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಕುದರಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಬಸಪ್ಪ ಸಂತಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಮೂಡಲಗಿ ಪುರಸಭೆ ಸದಸ್ಯ ಪಾಂಡು ಮಹೇಂದ್ರಕರ, ಅರಭಾವಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts: