ಗೋಕಾಕ:ಸವದತ್ತಿ ಯಲ್ಲಮ್ಮನ ಜಾತ್ರೆಗೆ ತೆರಳುತ್ತಿದ್ದ ವಾಹನ ಅಪಘಾತ : ಗಂಭೀರವಾಗಿ ಗಾಯಗೊಂಡ 16 ಜನ ನಗರದ ಆಸ್ಪತ್ರೆಯಲ್ಲಿ ದಾಖಲು
ಸವದತ್ತಿ ಯಲ್ಲಮ್ಮನ ಜಾತ್ರೆಗೆ ತೆರಳುತ್ತಿದ್ದ ವಾಹನ ಅಪಘಾತ : ಗಂಭೀರವಾಗಿ ಗಾಯಗೊಂಡ 16 ಜನ ನಗರದ ಆಸ್ಪತ್ರೆಯಲ್ಲಿ ದಾಖಲು
ಗೋಕಾಕ ಜ 5 : ಸವದತ್ತಿ ಯಲ್ಲಮ್ಮನ ಜಾತ್ರೆಯಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಭಕ್ತರ ವಾಹನ ಆಲದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ 6 ಜನ ಸಾವನ್ನಪ್ಪಿದ್ದು , 16 ಜನ ಗಂಭೀರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮದುರ್ಗ ತಾಲೂಕಿನ ಕಡಕೋಳ ಪೊಲೀಸ್ ಠಾಣಾ ವ್ಯಾಪ್ತಿಯ ಚುಂಚನೂರು ಬಳಿ ಅಪಘಾತ ಸಂಭವಿಸಿದ್ದು, ವಿಠ್ಠಲ್-ರುಕ್ಮಿಣಿ ದೇವಸ್ಥಾನದ ಆಲದ ಮರಕ್ಕೆ ಮಹೇಂದ್ರ ಗೂಡ್ಸ್ ವಾಹನ ಡಿಕ್ಕಿಯಾಗಿ ಈ ಭಾರಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮೃತರು ಶ್ರೀಮತಿ ದೀಪಾ ಶಂಕರ ಹರಿಜನ ವಯಸ್ಸು 31 ಸಾ ಹುಲಕುಂದ, ಕು-ಸುಪ್ರಿಯಾ ತಂದೆ ಶಂಕರ ಹರಿಜನ ವಯಸ್ಸು 11, ಹಣಮವ್ವಾ ಶ್ರವಣ ಮ್ಯಾಗಾಡಿ ವಯಸ್ಸು 25,ಕು – ಸವಿತಾ ತಂದೆ ಲಕ್ಷ್ಮಣ ಮುಂಡಸಿ ವಯಸ್ಸು 17, ಮಾರುತಿ ಯಲ್ಲಪ್ಪಾ ಬನ್ನೂರ ವಯಸ್ಸು 42, ಶ್ರೀಮತಿ ಇಂದ್ರವ್ವಾ ಫಕೀರಪ್ಪಾ ಸಿದ್ದಮೆತ್ರಿ ಎಂದು ಗುರುತಿಸಲಾಗಿದ್ದು, ಎಲ್ಲರೂ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದವರಾಗಿದ್ದಾರೆ. , ಗಂಭೀರವಾಗಿ ಗಾಯಗೊಂಡ ಇನ್ನುಳಿದ 16 ಜನರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ ಮೂಲಗಳಿಂದ ತಿಳಿದು ಬಂದಿದೆ. ಈ ಘಟನೆಯ ಕುರಿತು ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾತ್ರಾರ್ಥಿಗಳೆಲ್ಲರೂ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ. ಸಿಎಂ ಬೊಮ್ಮಾಯಿ ಅವರು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವಂತೆ ಹೇಳಿದ್ದಾರೆ. ಅದೇ ರೀತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.