ಬೆಳಗಾವಿ:ಏ. 10ರೊಳಗೆ ಕಾಂಗ್ರೆಸ್ ನ 2ನೇ ಪಟ್ಟಿ ಪ್ರಕಟ: ಚುನಾವಣಾ ಪ್ರಚಾರದ ವಾಹನ ಸ್ಮಶಾನದಲ್ಲಿ ಪೂಜೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಏ. 10ರೊಳಗೆ ಕಾಂಗ್ರೆಸ್ ನ 2ನೇ ಪಟ್ಟಿ ಪ್ರಕಟ: ಚುನಾವಣಾ ಪ್ರಚಾರದ ವಾಹನ ಸ್ಮಶಾನದಲ್ಲಿ ಪೂಜೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ ಎ 2 : ಕಾಂಗ್ರೆಸ್‌ನ 1ನೇ ಪಟ್ಟಿ ಈಗಾಗಲೇ ಬಿಡುಗಡೆಗೊಳಿಸಿದ್ದು, 2ನೇ ಪಟ್ಟಿಯನ್ನು ಏ. 10ರೊಳಗೆ ಬಿಡುಗಡೆಗೊಳಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 12 ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. 10ರಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಮೂರು ಕ್ಷೇತ್ರದಲ್ಲಿ ಗೊಂದಲ ಇದೆ. ಅದನ್ನು ಶೀಘ್ರ ಇತ್ಯರ್ಥ ಪಡಿಸಲಾಗುವುದು. ಮೊದಲನೇ ಹಂತದಲ್ಲಿ ಹಾಲಿ, ಮಾಜಿ ಶಾಸಕರೂ ಇದ್ದಾರೆ. ರಾಯಬಾಗ, ಸವದತ್ತಿಯಲ್ಲಿಯೂ ಸಾಕಷ್ಟು ಗೊಂದಲ ಇದೆ. ಅದನ್ನು ಸಂಧಾನ ಮಾಡಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು.
ಗೆಲ್ಲುವ ಅಭ್ಯರ್ಥಿ, ಜನರ ಜೊತೆಗೆ ನಿಕಟ ಸಂಪರ್ಕ ಹೊಂದಿರುವವರಿಗೆ ಟಿಕೆಟ್ ನೀಡಲಾಗುವುದು. ಕೆಲ ಮತಕ್ಷೇತ್ರದಲ್ಲಿ ಗೊಂದಲ ಇದೆ. ಅದನ್ನು ಬಗೆ ಹರಿಸಲಾಗುವುದು. ಈಗಾಗಲೇ ಸಂಧಾನ ಸಭೆ ನಡೆಸಿ ಅಸಮಾಧಾನಿತರನ್ನು ಮನವೊಲಿಸಲಾಗುವುದು ಎಂದು ತಿಳಿಸಿದರು. ಕಳೆದ ಬಾರಿಯ ಬಂಡಾಯದಿಂದ ಸವದತ್ತಿ ಹಾಗೂ ರಾಯಬಾಗ ಕ್ಷೇತ್ರದವನ್ನು ಕಳೆದುಕೊಂಡಿದ್ದೇವು. ಆದರೆ ಈ ಸಾರಿ ಹೊಂದಾಣಿಕೆ ಮಾಡುವುದರ ಮೂಲಕ ಕಾಂಗ್ರೆಸ್ ಗೆಲ್ಲಿಸುವ ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಗೆ ಬರುವ ಮಾಹಿತಿ ಇಲ್ಲ. ಆದರೆ ಅಥಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸಮರ್ಥವಾಗಿದ್ದಾರೆ. ರಾಮದುರ್ಗ ಮತಕ್ಷೇತ್ರದಲ್ಲಿ ಯಾವುದೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಇಲ್ಲ. ಕೆಲವರು ಸುದ್ದಿಗೋಷ್ಠಿ ನಡೆಸಿ ನಾನು ರಾಮದುರ್ಗದ ಬಂಡಾಯದ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಅವರು ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿಲ್ಲ ಎಂದು ಹೇಳಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಮತಕ್ಷೇತ್ರದ 40 ವರ್ಷಗಳಿಂದ ಕೈ ಹಿಡಿದಿದೆ. ಅವರ ಗೆಲುವಿಗೆ ಶ್ರಮಿಸುವ ಅಗತ್ಯ ಇಲ್ಲ. ಅವರು ಗೆದ್ದೆ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಯಮಕನಮರಡಿ ಕ್ಷೇತ್ರದಲ್ಲಿ ಈ ಬಾರಿ ಪ್ರಚಾರ ನಡೆಸುತ್ತೇನೆ.ಇಲ್ಲದಿದ್ದರೆ ವಿರೋಧಿಗಳು ಅಪಪ್ರಚಾರ ನಡೆಸುತ್ತಾರೆ.ಕಳೆದ ಬಾರಿ ಅಪಪ್ರಚಾರ ಮಾಡಿದ್ದರಿಂದ ಗೆಲುವಿನ ಅಂತರ ಕಡಿಮೆಯಾಗಿತ್ತು. ಆದ್ದರಿಂದ ಈ ಬಾರಿ ಪ್ರಚಾರಕ್ಕೆ ಹೋಗುತ್ತೇನೆ ಅಲ್ಲದೆ ಚುನಾವಣಾ ಪ್ರಚಾರದ ವಾಹನವನ್ನು ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಪ್ರಾರಂಭಿಸಲಾಗುವದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಸುನಿಲ್ ಹನುಮನ್ನವರ, ರಾಜೇಂದ್ರ ಪಾಟೀಲ,ಲಕ್ಷ್ಮಣರಾವ ಚಿಂಗಳೆ,ಸಿದ್ದಿಕ್ ಅಂಕಲಗಿ ಉಪಸ್ಥಿತರಿದ್ದರು.