ಗೋಕಾಕ:ಶಾಸಕ ರಮೇಶ ಜಾರಕಿಹೊಳಿ ಅವರನ್ನು ಮತ್ತೋಮ್ಮೆ ಆಶೀರ್ವಧಿಸಿ : ಅಂಬಿರಾವ ಪಾಟೀಲ ಮನವಿ
ಶಾಸಕ ರಮೇಶ ಜಾರಕಿಹೊಳಿ ಅವರನ್ನು ಮತ್ತೋಮ್ಮೆ ಆಶೀರ್ವಧಿಸಿ : ಅಂಬಿರಾವ ಪಾಟೀಲ ಮನವಿ
ಗೋಕಾಕ ಮೇ 7 : ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಮತ್ತೋಮ್ಮೆ ಆಶೀರ್ವಧಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ರವಿವಾರದಂದು ಗೋಕಾಕ ಮತಕ್ಷೇತ್ರದ ಖನಗಾಂವ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ಮತಯಾಚನೆ ನಡೆಸಿ ಮಾತನಾಡಿ, ವಿರೋಧಿಗಳ ಮಾತಿಗೆ ಕಿವಿಗೋಡದೆ ಅಭಿವೃದ್ಧಿ ಹರಿಕಾರರಾಗಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಆಯ್ಕೆ ಮಾಡುವ ಮೂಲಕ ಇತಿಹಾಸ ನಿರ್ಮಿಸುವಂತೆ ತಿಳಿಸಿದರು.
ಗೋಕಾಕ ಮತಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿ ಕ್ಷೇತ್ರÀ ಅಭಿವೃದ್ಧಿಪಡಿಸಿದ್ದಾರೆ. ಗೋಕಾಕ ನಗರದಲ್ಲಿ ಖಾಸಗಿ ಆಸ್ಪತ್ರೆಗಿಂತ ಮೀಗಿಲಾದ ಹೈಟೇಕ್ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಿಸಿದ್ದು ಅದೇ ಆಸ್ಪತ್ರೆ 100ರಿಂದ 200ಬೇಡ್ ಮೇಲ್ದರ್ಜೆಗೆರಿಸಲಾಗಿದೆ. ರೈತರಿಗೆ ಹಾಗೂ ಗೋಕಾಕ ನಗರ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಗಿಕೊಳ್ಳದ ಘಟ್ಟಿಬಸವಣ್ಣ ಜಲಾಶಯ ನಿರ್ಮಾಣ, ಘಟಪ್ರಭಾ ನದಿ ಪ್ರವಾಹದಿಂದ ನಗರವನ್ನು ರಕ್ಷಿಸುವ ನಿಟ್ಟಿನಲ್ಲಿ ತಡೆ ಗೋಡೆ, ಕ್ಷೇತ್ರದ ವಿವಿಧೆಡೆ ಬ್ರೀಡ್ಜ್ ಕಂ ಬ್ಯಾರೇಜ್ ಬಂದಾರ ನಿರ್ಮಾಣ ಸೇರಿ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ಅಭಿವೃದ್ಧಿಕಾರ್ಯಗಳಿಗೆ ಶ್ರಮಿಸುತ್ತಿದ್ದಾರೆ ಎಂದರು.
ಗೋಕಾಕ ಮತ ಕ್ಷೇತ್ರದ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ರಸ್ತೆಗಳ ಅಭಿವೃದ್ಧಿ, ತೋಟಪಟ್ಟಿ ರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಆರಿಸಿ ತರುವಂತೆ ಮನವಿ ಮಾಡಿದರು.
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ತಮ್ಮ ಬೆಂಬಲಿಗರೊಂದಿಗೆ ಪಾರನಟ್ಟಿ, ಮಾಲದಿನ್ನಿ, ಉಪ್ಪಾರಹಟ್ಟಿ, ಮಮದಾಪೂರ, ಮಕ್ಕಳಗೇರಿ, ನಭಾಪೂರ, ದೇವಗೌಡನಹಟ್ಟಿ, ಖನಗಾಂವ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ. ಎಮ್ ಎಲ್ ತೋಳಿನವರ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಪಂ ಅಧ್ಯಕ್ಷರು-ಸದಸ್ಯರು, ಪಿಕೆಪಿಎಸ್ ಅಧ್ಯಕ್ಷರು-ಸದಸ್ಯರು, ಗ್ರಾಮಗಳ ಹಿರಿಯರು ಉಪಸ್ಥಿತರಿದ್ದರು.