ಗೋಕಾಕ:ವೈದ್ಯರು ಸಾರ್ವಜನಿಕರಿಗೆ ಒಳ್ಳೆಯ ಸೇವೆ ನೀಡಬೇಕು : ಸಚಿವ ಸತೀಶ ಜಾರಕಿಹೊಳಿ
ವೈದ್ಯರು ಸಾರ್ವಜನಿಕರಿಗೆ ಒಳ್ಳೆಯ ಸೇವೆ ನೀಡಬೇಕು : ಸಚಿವ ಸತೀಶ ಜಾರಕಿಹೊಳಿ
ಗೋಕಾಕ ಜು 1 : ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಸರಕಾರದಿಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ವೈದ್ಯರು ಸಾರ್ವಜನಿಕರಿಗೆ ಒಳ್ಳೆಯ ಸೇವೆ ನೀಡಬೇಕು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.
ವೈದ್ಶ ದಿನಾಚರಣೆ ಅಂಗವಾಗಿ ಶನಿವಾರದಂದು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಗೆ ಶುಭಾಶಯ ತಿಳಿಸಿ, ವೈದ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಸೂಕ್ತ ವೈದ್ಯಕೀಯ ಸೇವೆ ಒದಗಿಸುವ ಬಗ್ಗೆ ವೈದ್ಯರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಸರ್ಕಾರವು ಬಡವರಿಗಾಗಿ ಹಲ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ಬಗ್ಗೆ ಬಡವರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ವೈದ್ಯರು, ನರ್ಸ್ಗಳು ಆಸ್ಪತ್ರೆಗೆ ಬರುವ ಪ್ರತಿ ರೋಗಿಯನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಸ್ಥಳೀಯ ಆಸ್ಪತ್ರೆಯನ್ನು ಉನ್ನತಮಟ್ಟಕ್ಕೇರಿಸಲು ಆದಷ್ಟು ಬೇಗ ಸೂಕ್ತ ಕೈಗೊಂಡು ಆಸ್ಪತ್ರೆಯನ್ನು ರಾಜ್ಯದಲ್ಲಿ ಮಾದರಿ ಆಸ್ಪತ್ರೆಯನ್ನಾಗಿಸಲು ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸಭೆಯಲ್ಲಿ ಡಿಜೆಡಿ ಡಾ.ಪುಸ್ಪಾ , ಎಡಿಎಚ್ಓ ಡಾ.ಗಡೇದ, ಇಂಜಿನಿಯರಿಂಗ್ ವಿಭಾಗ ಸುರೇಶ್ ಎನ್, ಡಾ.ರವೀಈ ಅಂಟಿನ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು