ಗೋಕಾಕ:ಸಾಂಸ್ಕೃತಿಕ ಚಟುವಟಿಕೆಗಳು ಜೀವನದ ಅವಿಭಾಜ್ಯ ಅಂಗವಾಗಬೇಕು : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ
ಸಾಂಸ್ಕೃತಿಕ ಚಟುವಟಿಕೆಗಳು ಜೀವನದ ಅವಿಭಾಜ್ಯ ಅಂಗವಾಗಬೇಕು : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ
ಗೋಕಾಕ ಜ 6 :.ವಿದ್ಯಾರ್ಥಿಗಳಿಗೆ ಪಠ್ಯದಂತೆಯೇ ಪಠ್ಯೇತರ ಚಟುವಟಿಜಕೆಗಳು ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆಗಳು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಅಭಿಪ್ರಾಯಪಟ್ಟರು.
ಶುಕ್ರವಾರದಂದು ನಗರದಲ್ಲಿ ಅಬುಲ್ ಕಲಾಂ ಆಜಾದ ಪೂರ್ವ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಲೆ, ಸಾಹಿತ್ಯ, ಸಂಗೀತ ಸಾಂಸ್ಕೃತಿಕ ಲೋಕದ ಜಗತ್ತನ್ನು ಪರಿಚಯಿಸುತ್ತದೆ. ಬೇಸರವಾದಾಗ ಆಸರೆಯಂತೆ ಸಾಹಿತ್ಯ ಸಂಗೀತಗಳು ಮಾನವನಿಗೆ ಸಂಜೀವಿನಿಯಾಗುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕ ದಿಸೆಯಲ್ಲಿ ಸಾಂಸ್ಕೃತಿಕ ಜಗತ್ತನ್ನು ಪರಿಚಯಿಸಿಕೊಳ್ಳುವುದರಿಂದ ತಮ್ಮ ಮುಂದಿನ ಭವಿಷ್ಯಕ್ಕೆ ಸ್ಫೂರ್ತಿಯಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿ/ ವಿದ್ಯಾರ್ಥಿನೀಯರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಅಯೂಬ ಖಾನ, ನಿರ್ದೇಶಕರುಗಳಾದ ದಸ್ತಗಿರಿ ಪೈಲವಾನ, ದಸ್ತಗಿರ ಮಲ್ಲಾಪೂರ, ಡಾ ಅಬ್ದುಲವಹಾಬ ಜಮಾದಾರ, ಶಿಕ್ಷಕ ಪಾರುಖ ಖೈರದಿ, ಸಲೀಂ ಖೈರದಿ , ಇಮಾಮ ಬೋಜಗರ, ಪ್ರಾಚಾರ್ಯ ಹಾಪೀಜುಲ್ಲಾ ಜತ್ತಿ, ಮುಖ್ಯೋಪಾಧ್ಯಾಯ ಅಶಫಾಕ್ ಶಾಬಾಶಖಾನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು