RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಬರಗಾಲ ನಿರ್ವಹಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ : ಸಂಜಯ್ ಪಾಟೀಲ್

ಗೋಕಾಕ:ಬರಗಾಲ ನಿರ್ವಹಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ : ಸಂಜಯ್ ಪಾಟೀಲ್ 

ಬರಗಾಲ ನಿರ್ವಹಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ : ಸಂಜಯ್ ಪಾಟೀಲ್

ಗೋಕಾಕ ಮಾ 21 : ಬರಗಾಲ ನಿರ್ವಹಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಪಕ್ಷದ ಚುನಾವಣಾ ಜಿಲ್ಲಾ ಸಹ ಸಂಚಾಲಕ ಸಂಜಯ ಪಾಟೀಲ ಆರೋಪಿಸಿದರು.
ಅವರು, ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕರೇದ ಪತ್ರಿಕಾಗಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ ರಾಜ್ಯದಲ್ಲಿ ಬೀಕರ ಬರಗಾಲದಿಂದ 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ತಮನ್ನು ಸೀಮಿತಗೊಳಿಸಿಕೊಂಡಿದ್ದಾರೆ. ಕಾಂಗ್ರೇಸ್ ಒಕ್ಕೂಟದ ಭಾಗಿದಾರ ಪಕ್ಷದ ಸ್ಟ್ಯಾಲಿನ್ ಅವರ ಕೋರಿಕೆಯ ಮೇರೆಗೆ ರಾಜ್ಯದಲ್ಲಿ ನೀಡಿನ ಹಾಹಾಕಾರವಿದ್ದರು. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ ಎಂದರು.
ರಾಜ್ಯ ಸರಕಾರದಲ್ಲಿ ಹಣವಿಲ್ಲದ ಕಾರಣ ರೈತರಿಗೆ ಪರಿಹಾರ ದೊರೆಯುತ್ತಿಲ್ಲ. ಸರಕಾರವೇ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದರು ಸಚಿವರುಗಳು ಇದಕ್ಕೆ ಸ್ಫಂಧಿಸುತ್ತಿಲ್ಲ. ಬಡವರ ವಿರೋಧಿ ಸರಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

Related posts: