ಗೋಕಾಕ:ಗ್ಯಾರಂಟಿ’ಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: : ಅನುಷ್ಠಾನ ಸಮಿತಿ ಅಧ್ಯಕ್ಷ ಡಾ.ಮಹಾಂತೇಶ ಕಡಾಡಿ
ಗ್ಯಾರಂಟಿ’ಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: : ಅನುಷ್ಠಾನ ಸಮಿತಿ ಅಧ್ಯಕ್ಷ ಡಾ.ಮಹಾಂತೇಶ ಕಡಾಡಿ
ಗೋಕಾಕ ಡಿ 5 : ಜನರಿಗೆ ನೆರವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು’ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಡಾ.ಮಹಾಂತೇಶ ಕಡಾಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರದಂದು ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ವಿವಿಧ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕ ಹೊಂದಿ, ಸರ್ಕಾರದ ವಿವಿಧ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಬೇಕು. ಸರ್ಕಾರಿ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ, ಹೆಸ್ಕಾಂ ಅಧಿಕಾರಿ ಎಸ್.ಬಿ.ವರಾಳೆ, ಆಹಾರ ಇಲಾಖೆಯ ನಿರೀಕ್ಷಿಕಿ ಗೀತಾ ರಡರಟ್ಟಿ, ಸಿಡಿಪಿಓ ಕುಡವಕ್ಕಲಿಗ , ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.