ಗೋಕಾಕ:ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ : ಮೇಲ್ಮನಹಟ್ಟಿ ಗ್ರಾಮದ ಬಾಲಕನ ಸಾಧನೆ
ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ : ಮೇಲ್ಮನಹಟ್ಟಿ ಗ್ರಾಮದ ಬಾಲಕನ ಸಾಧನೆ
ಗೋಕಾಕ ಅ 28: ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಟಿಇಎಸ್ ಪ್ರೌಢಶಾಲೆ ವಿದ್ಯಾರ್ಥಿ ದಶರಥ ನಿಂಗಪ್ಪ ತಳವಾರ ಬೆಳಗಾವಿಯಲ್ಲಿ ಇತ್ತಿಚೆಗೆ ನಡೆದ ರಾಜ್ಯ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ 5 ಕೀಮಿ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಮ್.ಎಲ್.ಮುತ್ತೆಣ್ಣವರ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಕ್ಷೇತ್ರ ದೈಹಿಕ ಶಿಕ್ಷಣ ಪರಿವಿಕ್ಷಕ ವಿಜಯಕುಮಾರ ಸೂಲೆಗಾಂವಿ, ಮುಖ್ಯೋಪಾಧ್ಯಯ ಕೆ.ಬಿ.ಕುರಬೇಟ, ದೈಹಿಕ ಶಿಕ್ಷಕ ಯು.ಬಿ.ಮುತ್ನಾಳ ಹಾಗೂ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.